ನವದೆಹಲಿ: ಐಐಎಂ ಮತ್ತು ಐಐಎಸ್ಸಿಯಂತಹ ಪ್ರತಿಷ್ಠಿತ ಸಂಸ್ಥೆಗಳ ಯುವ ಪ್ರತಿಭೆಗಳ ಸಹಾಯವನ್ನು ಪಡೆದುಕೊಂಡು ಸಂಸತ್ತಿನಲ್ಲಿ ತನ್ನ ಸಂಸದರನ್ನು ಹೆಚ್ಚು ಕ್ರಿಯಾಶೀಲಗೊಳಿಸುವ ಯೋಜನೆಯನ್ನು ಬಿಜೆಪಿ ಹಾಕಿಕೊಂಡಿದೆ. ಸಂಸದರಿಗೆ ಸಹಾಯಕರಾಗಿ ಈ ಪ್ರತಿಭೆಗಳನ್ನು ಬಿಜೆಪಿ ನಿಯೋಜಿಸುತ್ತಿದೆ.
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್, ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು, ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ ಮತ್ತು ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ನ 40 ವಿದ್ಯಾರ್ಥಿಗಳನ್ನು 17 ನೇ ಲೋಕಸಭೆಯ ಮೊದಲ ಅಧಿವೇಶನಕ್ಕಾಗಿ ಬಿಜೆಪಿ ಸಂಸದರೊಂದಿಗೆ ಸಂಪರ್ಕಿಸಲಾಗಿದೆ ಎಂದು ಬಿಜೆಪಿಯ ಸಂಸದೀಯ ಕಾರ್ಯದರ್ಶಿ ಬಾಲಸುಬ್ರಹ್ಮಣ್ಯಂ ಕಾಮರ್ಸು ಹೇಳಿದರು.
ಉತ್ತಮ ಕೊಡುಗೆಗಳಿಗಾಗಿ ವಿದ್ಯಾರ್ಥಿಗಳನ್ನು ಶ್ಲಾಘಿಸಿರುವ ಕಾಮರ್ಸು ಅವರು, ಈ ವಿದ್ಯಾರ್ಥಿಗಳು ಸಾಕಷ್ಟು ಸಂಶೋಧನೆ ನಡೆಸಿದ್ದಾರೆ, ವಿಶಾಲವಾದ ವಿಷಯಗಳನ್ನು ಅಧ್ಯಯನ ಮಾಡಿದ್ದಾರೆ ಮತ್ತು ಪ್ರಸ್ತುತ ನಡೆಯುತ್ತಿರುವ ಅಧಿವೇಶನದಲ್ಲಿ ಪಕ್ಷದ ಸಂಸದರಿಗೆ ಅಮೂಲ್ಯವಾದ ಸಲಹೆ ಸೂಚನೆಗಳನ್ನು ನೀಡಿದ್ದಾರೆ, ಇದು ಸಂಸದರ ಭಾಷಣಗಳಲ್ಲಿ ಮತ್ತು ಪಕ್ಷದ ಸಂಸದರ ಸಕ್ರಿಯ ಭಾಗವಹಿಸುವಿಕೆಯಲ್ಲಿ ಪ್ರತಿಫಲನಗೊಳ್ಳುತ್ತಿದೆ ಎಂದಿದ್ದಾರೆ.
ರಾಷ್ಟ್ರಪತಿಗಳ ಭಾಷಣದ ಮೇಲಿನ ಚರ್ಚೆ ಮತ್ತು ಕೇಂದ್ರ ಬಜೆಟ್ ಕುರಿತ ಚರ್ಚೆ ವೇಳೆ ಸಂಸದರನ್ನು ಚರ್ಚೆಗೆ ಸಿದ್ಧಪಡಿಸಲು ವಿದ್ಯಾರ್ಥಿಗಳಯ ಬಹಳ ಸಹಾಯ ಮಾಡಿದ್ದಾರೆ. ಅನೇಕರು ನಾಗರಿಕ ಸೇವಾ ಪರೀಕ್ಷೆಗಳಿಗೆ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿರುವುದರಿಂದ ವಿದ್ಯಾರ್ಥಿಗಳಿಗೂ ಈ ಅನುಭವ ಅನುಕೂಲಕರವಾಗಿದೆ ಎಂದಿದ್ದಾರೆ.
ಈ ಎಲ್ಲ ವಿದ್ಯಾರ್ಥಿಗಳು ಥಿಂಕ್ ಇಂಡಿಯಾ ಮೂಲಕ ಬಂದವರು. ಇದು ‘ಸಂಸಾದಿಯಾ’ – ಸಂಸದೀಯ ಇಂಟರ್ನ್ಶಿಪ್ ಕಾರ್ಯಕ್ರಮಕ್ಕಾಗಿ ಬಿಜೆಪಿಯ ಹಿರಿಯ ಮುಖಂಡ ಮತ್ತು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರನ್ನು ಸಂಪರ್ಕ ಮಾಡಿತ್ತು.
ಇಂಟರ್ನ್ಶಿಪ್ ಕಾರ್ಯಕ್ರಮಕ್ಕಾಗಿ 600 ವಿದ್ಯಾರ್ಥಿಗಳು ಮತ್ತು ವೃತ್ತಿಪರರ ಅರ್ಜಿಯನ್ನು ಪಡೆದುಕೊಂಡಿದ್ದ ಥಿಂಕ್ ಇಂಡಿಯಾ, ಶಾರ್ಟ್ ಲಿಸ್ಟ್ ಮಾಡಿ 40 ಮಂದಿಯನ್ನು ಆಯ್ಕೆ ಮಾಡಿತ್ತು. ಬಳಿಕ ಜೋಶಿ ಅವರ ಅನುಮತಿಯನ್ನು ಪಡೆದು ಅವರನ್ನು ಸಂಸದರ ಸಹಾಯಕರನ್ನಾಗಿ ನೇಮಿಸಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.