ನವದೆಹಲಿ: ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯಂದು ಜಮ್ಮು ಕಾಶ್ಮೀರ ರಾಜ್ಯದ ಪ್ರತಿ ಪಂಚಾಯತ್ಗಳಲ್ಲಿ ತ್ರಿವರ್ಣ ಧ್ವವಜನ್ನು ಹಾರಿಸಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದ್ದು, ಈ ಹಿನ್ನಲೆಯಲ್ಲಿ ಭದ್ರತೆಗಾಗಿ ಕಾಶ್ಮೀರಕ್ಕೆ ಹೆಚ್ಚುವರಿ ಸೇನೆಯನ್ನು ಕಳುಹಿಸಿಕೊಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
“ಈ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಜಮ್ಮು ಕಾಶ್ಮೀರದ ಅನೇಕ ಪಂಚಾಯತ್ ಮುಖ್ಯಸ್ಥರು ರಾಷ್ಟ್ರಧ್ವಜವನ್ನು ಹಾರಿಸಲು ಬಯಸುತ್ತಿರುವುದರಿಂದ ಸರ್ಕಾರವು ಸೇನೆಯನ್ನು ಕಳುಹಿಸಿಕೊಡುತ್ತಿದೆ. ಈ ಕಾರ್ಯಕ್ಕೆ ಯಾವುದೇ ಅಡ್ಡಿ ಉಂಟಾಗದಂತೆ ಮತ್ತು ಯಾವುದೇ ಅಹಿತಕರ ಘಟನೆಗಳನ್ನು ನಡೆಯದಂತೆ ನೋಡಿಕೊಳ್ಳುವ ಸಲುವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಯೋಧರನ್ನು ನಿಯೋಜನೆ ಮಾಡಲಾಗುತ್ತಿದೆ ”ಎಂದು ಮೂಲಗಳು ತಿಳಿಸಿವೆ.
ಕಳೆದ ವಾರ ಕೇಂದ್ರ ಸರ್ಕಾರವು 10 ಸಾವಿರ ಹೆಚ್ಚುವರಿ ಯೋಧರನ್ನು ಜಮ್ಮು ಕಾಶ್ಮೀರಕ್ಕೆ ಕಳುಹಿಸಿಕೊಟ್ಟಿತ್ತು. ಇದು ಭಾರೀ ಚರ್ಚೆಗಳನ್ನು ಹುಟ್ಟು ಹಾಕಿತ್ತು.
ಆಗಸ್ಟ್ 15 ರಂದು ತ್ರಿವರ್ಣ ಧ್ವಜವನ್ನು ಹಾರಿಸಲು ಕೇಂದ್ರದ ಆಡಳಿತಾರೂಢ ಬಿಜೆಪಿ ಈಗಾಗಲೇ ಈ ರಾಜ್ಯದ ಪ್ರತಿ ಪಂಚಾಯತ್ಗಳಲ್ಲಿನ ತನ್ನ ಘಟಕಗಳಿಗೆ ಸೂಚನೆ ನೀಡಿದೆ ಎಂದು ಮೂಲಗಳು ತಿಳಿಸಿವೆ.
ಜಮ್ಮು ಕಾಶ್ಮೀರ ಭಾರತದ ಅವಿಭಾಜ್ಯ ಅಂಗವೇ ಆಗಿದ್ದರೂ ಕೂಡ ತ್ರಿವರ್ಣ ಧ್ವಜವನ್ನು ಹಾರಿಸಲು ಅಲ್ಲಿ ಕೆಲ ಭಯೋತ್ಪಾದನಾ ಪ್ರೇರಿತ ಜನರಿಂದ ವಿರೋಧಗಳು ವ್ಯಕ್ತವಾಗುತ್ತಿವೆ. ಈ ಹಿನ್ನಲೆಯಲ್ಲಿ ಸೈನಿಕರ ಬಿಗಿ ಭದ್ರತೆಯ ನಡುವೆಯೇ ಹೆಮ್ಮೆಯ ಧ್ವಜವನ್ನು ಹಾರಿಸುವುದು ಅನಿವಾರ್ಯವಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.