ಮುಂಬಯಿ: ಮಹಾರಾಷ್ಟ್ರದಲ್ಲಿ ಪ್ರತಿಪಕ್ಷಗಳಿಗೆ ತೀವ್ರ ಹಿನ್ನಡೆಯಾಗಿದೆ, ಶರದ್ ಪವರ್ ನೇತೃತ್ವದ ಎನ್ಸಿಪಿ ಪಕ್ಷದ ಮೂವರು ಶಾಸಕರು ಮತ್ತು ಕಾಂಗ್ರೆಸ್ ಪಕ್ಷದ ಓರ್ವ ಶಾಸಕ ಇಂದು ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ನೇತೃತ್ವದಲ್ಲಿ ಬಿಜೆಪಿಯನ್ನು ಸೇರ್ಪಡೆಗೊಂಡಿದ್ದಾರೆ.
ಈ ನಾಲ್ವರನ್ನು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಕಣಕ್ಕಿಳಿಸಲಿದೆ ಎಂದು ಹೇಳಲಾಗುತ್ತಿದೆ. ಬಿಜೆಪಿ ಮತ್ತು ಶಿವಸೇನಾ ನಡುವಿನ ಸೀಟು ಹಂಚಿಕೆಯ ನಿರ್ಧಾರ ಅಂತಿವಾದ ಬಳಿಕ ಈ ಶಾಸಕರು ಚುನಾವಣೆಗೆ ಸ್ಪರ್ಧಿಸುವುದು ಖಚಿತವಾಗಲಿದೆ ಎಂದು ಮೂಲಗಳು ತಿಳಿಸಿವೆ.
ಎನ್ಸಿಪಿಯ ಸತಾರಾ ಶಾಸಕ ಶಿವೇಂದ್ರರಾಜೆ ಭೋಸಲೆ, ನವೀ ಮುಂಬಯಿಯ ಐರೋಲಿಯ ಶಾಸಕ ಸಂದೀಪ್ ನಾಯಕ್ ಮತ್ತು ಅಹ್ಮದ್ನಗರ ಜಿಲ್ಲೆಯ ಅಕೋಲೆಯ ಶಾಸಕ ವೈಭವ್ ಪಿಚಾದ್ ಬಿಜೆಪಿಯನ್ನು ಸೇರಿದವರಾಗಿದ್ದಾರೆ. ಮುಂಬೈನ ವಡಾಲಾದ ಕಾಂಗ್ರೆಸ್ ಕಾಳಿದಾಸ್ ಕೋಲಾಂಬ್ಕರ್ ಬಿಜೆಪಿ ಸೇರಿದ್ದಾರೆ.
ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಚಂದ್ರಕಾಂತ್ ಪಾಟೀಲ್ ಅವರ ಸಮ್ಮುಖದಲ್ಲಿ ಶಾಸಕರು ಆಡಳಿತಾರೂಢ ಬಿಜೆಪಿಗೆ ಸೇರಿದ್ದಾರೆ.
ಮಹಾರಾಷ್ಟ್ರದಲ್ಲಿ ಶೀಘ್ರದಲ್ಲೇ ವಿಧಾನಸಭಾ ಚುನಾವಣೆಗಳು ಘೋಷಣೆಯಾಗಲಿವೆ. ಈ ಸಂದರ್ಭದಲ್ಲಿ ಶಾಸಕರುಗಳು ಬಿಜೆಪಿಗೆ ಸೇರ್ಪಡೆಗೊಳ್ಳುತ್ತಿರುವುದು ಕಾಂಗ್ರೆಸ್ ಮತ್ತು ಎನ್ಸಿಪಿ ಪಕ್ಷಕ್ಕೆ ದೊಡ್ಡ ಹೊಡೆತವನ್ನು ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.