ರಾಯ್ಪುರ: ಛತ್ತೀಸ್ಗಢದ ರಾಜನಂದಗಾಂವ್ನ ಸೀತಗೋಟ ಅರಣ್ಯ ಪ್ರದೇಶದಲ್ಲಿ ಶನಿವಾರ ಜಿಲ್ಲಾ ಮೀಸಲು ಪೊಲೀಸ್ ಪಡೆ ನಡೆಸಿದ ಎನ್ಕೌಂಟರಿಗೆ ಮೂವರು ಮಹಿಳೆಯರು ಸೇರಿದಂತೆ ಕನಿಷ್ಠ ಏಳು ನಕ್ಸಲರು ಸಾವನ್ನಪ್ಪಿದ್ದಾರೆ. ಎನ್ಕೌಂಟರ್ನಲ್ಲಿ ಮೂವರು ಭದ್ರತಾ ಸಿಬ್ಬಂದಿಗಳು ಗಾಯಗೊಂಡಿದ್ದಾರೆ.
ಘಟನೆ ನಡೆದ ಸ್ಥಳದಿಂದ ಭದ್ರತಾ ಸಿಬ್ಬಂದಿಗಳು ಭಾರೀ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ಎಕ್ 47 ರೈಫಲ್ಸ್, 303 ರೈಫಲ್, ಕಾರ್ಬೈನ್ಸ್ ಮತ್ತು ಇತರ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬಾಗ್ನಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಎನ್ಕೌಂಟರ್ ನಡೆದಿದೆ ಎಂದು ಛತ್ತೀಸ್ಗಢದ ಪೊಲೀಸ್ ಮಹಾನಿರ್ದೇಶಕ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಈ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದ್ದರೂ ಎದೆಗುಂದದೆ ಭದ್ರತಾ ಪಡೆಗಳು ಎನ್ಕೌಂಟರ್ ಮುಂದುವರೆಸಿ, ನಕ್ಸಲರನ್ನು ನೆಲಕ್ಕುರುಳಿಸುವಲ್ಲಿ ಯಶಸ್ವಿಯಾದವು ಎಂದು ಅವರು ಹೇಳಿದ್ದಾರೆ.
ಎನ್ಕೌಂಟರ್ ಪ್ರಾರಂಭವಾದ ಸಂದರ್ಭದಲ್ಲಿ ಈ ಪ್ರದೇಶದಲ್ಲಿ 40 ರಿಂದ 50 ನಕ್ಸಲರು ಇದ್ದರು ಎಂದು ಶಂಕಿಸಲಾಗಿದೆ. ನಕ್ಸಲರ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.