ಶ್ರೀನಗರ: ಜಮ್ಮು ಕಾಶ್ಮೀರದ ಶೋಪಿಯಾನ ಜಿಲ್ಲೆಯ ಪಂಡೋಶನ್ ಗ್ರಾಮದಲ್ಲಿ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಗೆ ಶುಕ್ರವಾರ ರಾತ್ರಿ ಒರ್ವ ಉಗ್ರ ಬಲಿಯಾಗಿದ್ದಾನೆ ಎಂದು ಮೂಲಗಳು ತಿಳಿಸಿವೆ. ಮೃತ ಉಗ್ರನನ್ನು ಮನ್ಸೂರ್ ಭಟ್ ಎಂದು ಗುರುತಿಸಲಾಗಿದ್ದು, ಈತ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಗೆ ಸೇರಿದವನು ಎಂದು ಹೇಳಲಾಗಿದೆ.
ಮನ್ಸೂರ್ ಭಟ್ ಹಲವಾರು ಭಯೋತ್ಪಾದನಾ ಕೃತ್ಯಗಳಲ್ಲಿ ಭಾಗಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಕಾರ್ಯಾಚರಣೆ ನಡೆದ ಜಾಗದಿಂದ ಅಪಾರ ಪ್ರಮಾಣ ಶಸ್ತ್ರಾಸ್ತ್ರ ಮತ್ತು ಸ್ಪೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ.
ಕಾರ್ಯಾಚರಣೆಯ ವೇಳೆ ಇಬ್ಬರು ಸೈನಿಕರಿಗೆ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆಯನ್ನು ನೀಡಲಾಗಿದೆ. ಅವರ ಪರಿಸ್ಥಿತಿ ಈಗ ಸ್ಥಿರವಾಗಿದೆ ಎಂದು ಮೂಲಗಳು ತಿಳಿಸಿವೆ.
ಸುತ್ತಲ ಪರಿಸರವನ್ನು ಸುತ್ತುವರೆದು ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯನ್ನು ನಡೆಸಿವೆ. ಪ್ರಸ್ತುತ ಕಾರ್ಯಾಚರಣೆ ಅಂತ್ಯಗೊಂಡಿದೆ ಎನ್ನಲಾಗಿದೆ.
ಅದಕ್ಕೂ ಮುನ್ನ ಬಾರಮುಲ್ಲಾ ಜಿಲ್ಲೆಯ ಸಪೋರ ನಗರದ ಮನ್ಮಪನಪೋರದಲ್ಲಿ ನಿನ್ನೆ ಮತ್ತೊಂದು ಕಾರ್ಯಾಚರಣೆ ನಡೆದಿದ್ದು, ಅದರಲ್ಲಿಯೂ ಒರ್ವ ಉಗ್ರ ಮೃತಪಟ್ಟಿದ್ದಾನೆ. ಆತನ ಬಗ್ಗೆ ಹೆಚ್ಚಿನ ಮಾಹಿತಿಗಳು ಲಭ್ಯವಾಗಿಲ್ಲ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.