ನವದೆಹಲಿ: ದಿವಂಗತ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಅವರ ಪುಣ್ಯತಿಥಿಯಂದು ಪಕ್ಷದ ವತಿಯಿಂದ ಗೌರವ ನಮನಗಳನ್ನು ಸಲ್ಲಿಕೆ ಮಾಡಲು ಬಿಜೆಪಿ ನಿರ್ಧರಿಸಿದೆ. ವಾಜಪೇಯಿ ಅವರು 2018ರ ಆಗಸ್ಟ್ 16ರಂದು ಇಹಲೋಕವನ್ನು ತ್ಯಜಿಸಿದ್ದರು.
ಪಕ್ಷದ ಕೇಂದ್ರ ಕಛೇರಿಯಲ್ಲಿ ನಡೆದ ಸಭೆಯಲ್ಲಿ ಪಕ್ಷದ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಈ ನಿರ್ಧಾರವನ್ನು ತೆಗೆದುಕೊಂಡಿದ್ದು, ಪಕ್ಷದ ಕಾರ್ಯಕಾರಿ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಈ ಬಗ್ಗೆ ಸೂಚನೆಯನ್ನು ನೀಡಿದ್ದಾರೆ. ಈ ಸಭೆಯಲ್ಲಿ ಸದಸ್ಯತ್ವ ಅಭಿಯಾನಕ್ಕೆ ಸಂಬಂಧಿಸಿದ ಹಲವಾರು ವಿಷಯಗಳೂ ಚರ್ಚಿತಗೊಂಡಿದೆ.
ಪಕ್ಷದ ಅಗ್ರಗಣ್ಯ ನಾಯಕರಾಗಿದ್ದ ವಾಜಪೇಯಿ ಅವರು ಪುಣ್ಯತಿಥಿಯನ್ನು ಬಿಜೆಪಿ ಕುಟುಂಬದ ಪ್ರತಿಯೊಬ್ಬ ಸದಸ್ಯನೂ ಸ್ಮರಣೆ ಮಾಡಿಕೊಳ್ಳಬೇಕು ಎಂಬುದು ಬಿಜೆಪಿ ಮುಖಂಡರುಗಳ ಆಶಯವಾಗಿದೆ.
ಆ ದಿನ ವಾಜಪೇಯಿ ಅವರ ಸ್ಮರಣಾರ್ಥ ಹಲವಾರು ಕಾರ್ಯಕ್ರಮಗಳನ್ನು ಬಿಜೆಪಿ ಆಯೋಜನೆಗೊಳಿಸಲಿದೆ ಮತ್ತು ದೇಶದ ಎಲ್ಲಾ ಬಿಜೆಪಿ ಘಟಕಗಳೂ ಶ್ರದ್ಧಾಂಜಲಿ ಸಲ್ಲಿಕೆ ಕಾರ್ಯವನ್ನು ನಡೆಸಲಿದೆ ಎಂದು ಹಿರಿಯ ಮುಖಂಡರುಗಳು ಹೇಳಿದ್ದಾರೆ.
ಇದೇ ವೇಳೆ, ಬಿಜೆಪಿಯೂ ರಾಷ್ಟ್ರೀಯತೆಯ ಭಾವನೆಯನ್ನು ಉದ್ದೀಪಣಗೊಳಿಸುವ ನಿಟ್ಟಿನಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನೂ ವಿಶೇಷವಾಗಿ ಆಚರಿಸಲಿದೆ. ನಾಯಕರುಗಳು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಹುತಾತ್ಮರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡುವ ಮೂಲಕ ಆ ದಿನ ವೀರರಿಗೆ ಗೌರವ ನಮನಗಳನ್ನು ಸಲ್ಲಿಕೆ ಮಾಡಲಿದ್ದಾರೆ.
ಅಲ್ಲದೇ, ಸ್ವಾತಂತ್ರ್ಯ ದಿನವೇ ರಕ್ಷಾ ಬಂಧನವೂ ಇರುವುದರಿಂದ ಸೈನಿಕರಿಗೆ ರಕ್ಷೆ ಕಟ್ಟುವ ಕಾರ್ಯಕ್ರಮವೂ ಬಿಜೆಪಿ ವತಿಯಿಂದ ನಡೆಯಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.