ನವದೆಹಲಿ: ಜಮ್ಮು ಕಾಶ್ಮೀರಕ್ಕೆ ವಿಶೇಷಾಧಿಕಾರವನ್ನು ನೀಡಿರುವ ಸಂವಿಧಾನದ ಕಲಂ 370 ಅನ್ನು ತೆಗೆದು ಹಾಕುವುದಾಗಿ ರಾಜ್ಯಸಭೆಯಲ್ಲಿ ಸೋಮವಾರ ಅಮಿತ್ ಶಾ ಅವರು ಘೋಷನೆಯನ್ನು ಮಾಡಿ ಪ್ರಸ್ತಾಪ ಮಂಡಿಸಿದ್ದಾರೆ. ಈ ವೇಳೆ ಜಮ್ಮು ಕಾಶ್ಮೀರವನ್ನು ಕೇಂದ್ರಾಡಳಿತ ಪ್ರದೇಶವಾಗಿ ಇಬ್ಭಾಗ ಮಾಡುವುದಾಗಿಯೂ ಅವರು ಪ್ರಸ್ತಾಪಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರವನ್ನು ಒಂದು ಕೇಂದ್ರಾಡಳಿತ ಪ್ರದೇಶವಾಗಿ ಮತ್ತು ಲಡಾಖ್ ಅನ್ನು ಇನ್ನೊಂದು ಕೇಂದ್ರಾಡಳಿತ ಪ್ರದೇಶವಾಗಿ ಮಾಡುವುದಾಗಿ ಅಮಿತ್ ಶಾ ಘೋಷಣೆ ಮಾಡಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಇರುವ ಕೇಂದ್ರಾಡಳಿತ ಪ್ರದೇಶವಾಗಲಿದೆ, ಲಡಾಖ್ ವಿಧಾನಸಭೆ ಇಲ್ಲದ ಕೇಂದ್ರಾಡಳಿತ ಪ್ರದೇಶವಾಗಲಿದೆ.
ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ನಡೆಸಿದ ಸಂಪುಟ ಸಭೆಯ ಬಳಿಕ ಅಮಿತ್ ಶಾ ಅವರು ರಾಜ್ಯಸಭೆಯಲ್ಲಿ ಈ ಘೋಷಣೆಯನ್ನು ಮಾಡಿದ್ದಾರೆ.
ಕಲಂ 370 ಅನ್ನು ತೆಗೆದು ಹಾಕಿ, ಜಮ್ಮು ಕಾಶ್ಮೀರವನ್ನು ಎರಡು ಕೇಂದ್ರಾಡಳಿತ ಪ್ರದೇಶವನ್ನಾಗಿಸುವ ಕೇಂದ್ರದ ನಿರ್ಧಾರಕ್ಕೆ ಹಲವಾರು ಮಂದಿ ಶ್ಲಾಘನೆಯನ್ನು ವ್ತಕ್ತಪಡಿಸಿದ್ದಾರೆ. ಪ್ರತಿಪಕ್ಷಗಳು ಈ ನಿರ್ಧಾರಕ್ಕೆ ತೀವ್ರವಾಗಿ ವಿರೋಧಿಸಿವೆ.
HM Amit Shah: Jammu and Kashmir to be a union territory with legislature and Ladakh to be union territory without legislature pic.twitter.com/nsEL5Lr15h
— ANI (@ANI) August 5, 2019
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.