ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಗಳವಾರ ಲೋಕಸಭೆಯಲ್ಲಿ ಜಮ್ಮು ಕಾಶ್ಮೀರಕ್ಕೆ ಸಂಬಂಧಿಸಿದ ಮೂರು ಮಸೂದೆಗಳನ್ನು ಮಂಡನೆಗೊಳಿಸಲಿದ್ದಾರೆ. ಜಮ್ಮು ಮತ್ತು ಕಾಶ್ಮೀರ ಮರುಸಂಘಟನಾ ಮಸೂದೆ 2019, ಜಮ್ಮು ಮತ್ತು ಕಾಶ್ಮೀರ ಮೀಸಲಾತಿ (ಎರಡನೇ ತಿದ್ದುಪಡಿ) ಮಸೂದೆ 2019, 370ನೇ ವಿಧಿ ರದ್ದುಗಳಿಸುವ ಪ್ರಸ್ತಾಪಗಳನ್ನು ಇಂದು ಅವರು ಮಂಡನೆಗೊಳಿಸುತ್ತಿದ್ದಾರೆ.
ಜಮ್ಮು ಕಾಶ್ಮೀರಕ್ಕೆ ವಿಶೇಷಾಧಿಕಾರವನ್ನು ನೀಡಿದ್ದ ಸಂವಿಧಾನದ 370ನೇ ವಿಧಿಯನ್ನು ತೆಗೆದುಹಾಕುವ ಪ್ರಸ್ತಾಪಕ್ಕೆ ರಾಜ್ಯಸಭೆಯಲ್ಲಿ ಸೋಮವಾರ ಅಂಗೀಕಾರ ಸಿಕ್ಕಿದೆ. ೀ ವಿಧಿ ಭಯೋತ್ಪಾದನೆಗೆ ಮೂಲವಾಗಿತ್ತು ಎಂದು ಶಾ ಈ ವೇಳೆ ಹೇಳಿದ್ದರು. ಮೋದಿ ಸರ್ಕಾರ ಜಮ್ಮು ಕಾಶ್ಮೀರದ ಅಭಿವೃದ್ಧಿಗೆ ಬದ್ಧವಾಗಿದೆ ಎಂದು ಅವರು ಪುನರುಚ್ಛರಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ಮರುಸಂಘಟನಾ ಮಸೂದೆಯು ಈ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಲಿದೆ. ಜಮ್ಮು ಕಾಶ್ಮೀರ ವಿಧಾನಸಭೆ ಇರುವ ಕೇಂದ್ರಾಡಳಿತ ಪ್ರದೇಶವಾಗಲಿದೆ, ಲಡಾಖ್ ವಿಧಾನಸಭೆಯಿಲ್ಲದ ಕೇಂದ್ರಾಡಳಿತವಾಗಲಿದೆ. ರಾಜ್ಯಸಭೆಯಲ್ಲಿ ಈ ಮಸೂದೆಯ ಪರವಾಗಿ 125 ಮತಗಳು ಬಿದ್ದಿವೆ, ವಿರುದ್ಧವಾಗಿ 61 ಮತಗಳು ಬಿದ್ದಿವೆ. ಎನ್ ಸಿಪಿ ಮತದಾನದಿಂದ ದೂರ ಉಳಿದಿದೆ.
ರಾಜ್ಯಸಭೆಯಲ್ಲಿ ಮಸೂದೆ ಮಂಡನೆಯಾಗುತ್ತಿದ್ದಂತೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಅಧಿಸೂಚನೆಯನ್ನು ಹೊರಡಿಸಿದ್ದಾರೆ. ಇದರಲ್ಲಿ ‘ಸಂವಿಧಾನ (ಜಮ್ಮು ಕಾಶ್ಮೀರಕ್ಕೆ ಅನ್ವಯ) ಆದೇಶ, 2019 ತುರ್ತು ಜಾರಿಗೊಂಡಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಜಮ್ಮು ಕಾಶ್ಮೀರದ ಆರ್ಥಿಕವಾಗಿ ಹಿಂದುಳಿದವರಿಗೆ ಶೇ.10ರಷ್ಟು ಮೀಸಲಾತಿಯನ್ನು ನೀಡುವ ಮಸೂದೆಯನ್ನೂ ರಾಜ್ಯಸಭೆಯಲ್ಲಿ ಸೋಮವಾರ ಅನುಮೋದನೆಗೊಳಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.