ನವದೆಹಲಿ: ಭಾರತೀಯ ಸಂವಿಧಾನದ 370 ನೇ ವಿಧಿಯನ್ನು ರದ್ದುಗೊಳಿಸುವ ಮೂಲಕ ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಹಿಂತೆಗೆದುಕೊಳ್ಳುವ ಮತ್ತು ಆ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸುವ ಕೇಂದ್ರದ ನಿರ್ಧಾರವನ್ನು ಬಹುಜನ ಸಮಾಜವಾದಿ ಪಕ್ಷದ ಮುಖ್ಯಸ್ಥೆ ಮಾಯಾವತಿ ಮಂಗಳವಾರ ಶ್ಲಾಘಿಸಿದ್ದಾರೆ.
ಟ್ವಿಟ್ ಮಾಡಿರುವ ಅವರು, “ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನಕ್ಕೆ ಸಂಬಂಧಿಸಿದ ಕಲಂ 370 ಮತ್ತು ಕಲಂ 35 ಎ ಅನ್ನು ತೆಗೆದುಹಾಕುವ ಬೇಡಿಕೆಯು ದೀರ್ಘ ಸಮಯದಿಂದ ಬಾಕಿ ಉಳಿದಿತ್ತು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ತೆಗೆದುಕೊಂಡ ನಿರ್ಧಾರ ಅಲ್ಲಿ ವಾಸಿಸುವ ಜನರಿಗೆ ಲಾಭದಾಯಕವಾಗಲಿ ಎಂದು ಬಿಎಸ್ಪಿ ಈಗ ನಿರೀಕ್ಷಿಸುತ್ತದೆ” ಎಂದಿದ್ದಾರೆ.
ಲಡಾಖ್ ಅನ್ನು ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡುವ ಕೇಂದ್ರದ ನಿರ್ಧಾರದಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ವಾಸಿಸುತ್ತಿರುವ ಬೌದ್ಧ ಸಮುದಾಯವೂ ಸಂತುಷ್ಟಗೊಂಡಿದೆ ಎಂದು ಅವರು ಹೇಳಿದ್ದಾರೆ.
“ಲೇಹ್-ಲಡಾಖ್ ಅನ್ನು ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸುವುದರೊಂದಿಗೆ, ಜಮ್ಮು ಮತ್ತು ಕಾಶ್ಮೀರದ ಬೌದ್ಧ ಸಮುದಾಯದ ಬಹುದಿನಗಳ ಬೇಡಿಕೆ ಈಡೇರಿದೆ. ಬಿಎಸ್ ಪಿ ಈ ನಿರ್ಧಾರವನ್ನು ಸ್ವಾಗತಿಸುತ್ತದೆ. ಈ ನಿರ್ಧಾರದಿಂದ ಇಡೀ ದೇಶ ವಿಶೇಷವಾಗಿ ಡಾ.ಭೀಮರಾವ್ ಅಂಬೇಡ್ಕರ್ ಅವರ ಅನುಯಾಯಿಗಳಾದ ಬೌದ್ಧರು ತುಂಬಾ ಸಂತೋಷವಾಗಿದ್ದಾರೆ “ಎಂದು ಅವರು ಮತ್ತೊಂದು ಟ್ವೀಟ್ ನಲ್ಲಿ ಹೇಳಿದ್ದಾರೆ.
ಇವರಿಗೂ ಮೊದಲು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಜಮ್ಮು ಮತ್ತು ಕಾಶ್ಮೀರ ಕುರಿತು ಕೇಂದ್ರ ಸರ್ಕಾರದ ನಿರ್ಧಾರವನ್ನು ಶ್ಲಾಘಿಸಿ ಸರ್ಕಾರವನ್ನು ಬೆಂಬಲಿಸಿದರು. “ಜಮ್ಮು ಮತ್ತು ಕಾಶ್ಮೀರದ ಬಗೆಗಿನ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ನಾವು ಬೆಂಬಲ ನೀಡುತ್ತೇವೆ. ಇದು ರಾಜ್ಯದಲ್ಲಿ ಶಾಂತಿ ಮತ್ತು ಅಭಿವೃದ್ಧಿಯನ್ನು ತರುತ್ತದೆ ಎಂದು ನಾವು ಭಾವಿಸುತ್ತೇವೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.