ನವದೆಹಲಿ: ಜಮ್ಮು ಕಾಶ್ಮೀರಕ್ಕೆ ವಿಶೇಷಾಧಿಕಾರವನ್ನು ನೀಡುವ ಸಂವಿಧಾನದ 370ನೇ ವಿಧಿಯನ್ನು ರದ್ದುಪಡಿಸಿದ ಹಿನ್ನಲೆಯಲ್ಲಿ ಪಂಜಾಬ್ ಸರ್ಕಾರ ತನ್ನ ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ ಮಾಡಿದೆ. ಭದ್ರತಾ ವ್ಯವಸ್ಥೆಯನ್ನು ಬಲಗೊಳಿಸಲಾಗಿದ್ದು, ಪೊಲೀಸ್ ಅಧಿಕಾರಿಗಳು ಸ್ಥಿತಿಗತಿಯನ್ನು ಪರಿಶೀಲನೆಗೊಳಪಡಿಸುತ್ತಿದ್ದಾರೆ.
ಅಲ್ಲಿನ ಸರ್ಕಾರಕ್ಕೆ ಸಿಕ್ಕಿರುವ ಮಾಹಿತಿಯ ಪ್ರಕಾರ, ಪಾಕಿಸ್ಥಾನ ಬೆಂಬಲಿತ ಭಯೋತ್ಪಾದನಾ ಸಂಘಟನೆಗಳಾದ ಜೈಶೇ ಇ ಮೊಹಮ್ಮದ್ ಮತ್ತು ಲಷ್ಕರ್ ಇ ತೋಯ್ಬಾ ಪಂಜಾಬಿನಲ್ಲಿ ಆತ್ಮಾಹುತಿ ಬಾಂಬ್ ದಾಳಿಯನ್ನು ನಡೆಸಲು ಉದ್ದೇಶಿಸಿವೆ.
ಈ ಹಿನ್ನಲೆಯಲ್ಲಿ ಸರ್ಕಾರವು ಎಲ್ಲಾ ಜಿಲ್ಲಾ ಪೊಲೀಸ್ ವರಿಷ್ಠರಿಗೆ ಸ್ಪಷ್ಟ ನಿರ್ದೇಶವನ್ನು ಜಾರಿಗೊಳಿಸಿದೆ.
ಗೃಹ ಸಚಿವ ಅಮಿತ್ ಶಾ ಅವರು ಜಮ್ಮು ಕಾಶ್ಮೀರದ ವಿಶೇಷಾಧಿಕಾರ ರದ್ಧತಿಗೆ ಸಂಬಂಧಿಸಿದಂತೆ ಮಸೂದೆಗಳನ್ನು ಅನುಮೋದನೆಗೊಳಿಸಿದ ತಕ್ಷಣವೇ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರು ತನ್ನ ರಾಜ್ಯದಲ್ಲಿ ಈ ವಿಷಯದ ಬಗ್ಗೆ ಸಂಭ್ರಮಾಚರಣೆ ನಡೆಸದಂತೆ ನಿಷೇಧ ಹೇರಿದ್ದಾರೆ. ಅಲ್ಲದೇ, ರಾಜ್ಯದಲ್ಲಿ ಅಶಾಂತಿ ಸೃಷ್ಟಿಸಲು ಬಯಸುತ್ತಿರುವ ಪಾಕಿಸ್ಥಾನದ ಪ್ರಯತ್ನಗಳನ್ನು ವಿಫಲಗೊಳಿಸುವಂತೆ ಪೊಲೀಸ್ ಇಲಾಖೆಗೆ ಸೂಚಿಸಿದ್ದಾರೆ.
ರಾಜ್ಯದ ಕಾನೂನು ಸುವ್ಯವಸ್ಥೆ ಕುರಿತು ಮಾಹಿತಿ ಪಡೆಯಲು ಮುಖ್ಯಮಂತ್ರಿ ಸೋಮವಾರ ಭದ್ರತಾ ಪರಿಶೀಲನಾ ಸಭೆ ನಡೆಸಿದ್ದಾರೆ. ಪೊಲೀಸ್ ಮತ್ತು ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು, ಇದರಲ್ಲಿ ಸಿಂಗ್ 370 ನೇ ವಿಧಿಯನ್ನು ರದ್ದುಪಡಿಸಿದ ನಂತರ ತನ್ನ ರಾಜ್ಯದಲ್ಲಿನ ಸ್ಥಿತಿಗತಿಯ ಬಗ್ಗೆ ಮಾಹಿತಿಯನ್ನು ಪಡೆದುಕೊಂಡಿದ್ದಾರೆ.
ಯಾವುದೇ ಸಂಭವನೀಯತೆಗೆ ಸಿದ್ಧರಾಗಿರಬೇಕು ಎಂದು ಮುಖ್ಯಮಂತ್ರಿ ರಾಜ್ಯ ಪೊಲೀಸರಿಗೆ ಸೂಚಿಸಿದ್ದಾರೆ. ಪಂಜಾಬ್ನಲ್ಲಿ ಓದುತ್ತಿರುವ 8000ಕ್ಕೂ ಅಧಿಕ ಕಾಶ್ಮೀರಿ ವಿದ್ಯಾರ್ಥಿಗಳಿಗೆ ಹೆಚ್ಚಿನ ಭದ್ರತೆ ನೀಡುವಂತೆ ಆದೇಶಿಸಿದ್ದಾರೆ.ಈ ವಿದ್ಯಾರ್ಥಿಗಳನ್ನು ವೈಯಕ್ತಿಕವಾಗಿ ಭೇಟಿ ಮಾಡಿ ಮಾತುಕತೆ ನಡೆಸುವಂತೆ ಎಸ್ಪಿಗಳು ಮತ್ತು ಡಿಸಿಗಳಿಗೆ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.