ನವದೆಹಲಿ: ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿರುವುದಕ್ಕೆ ಮತ್ತು ಜಮ್ಮು ಕಾಶ್ಮೀರವನ್ನು ಎರಡು ಕೇಂದ್ರಾಡಳಿತ ಪ್ರದೇಶವನ್ನಾಗಿಸುವುದಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರು ಇಂದು ದೇಶವನ್ನು ಉದ್ದೇಶಿಸಿ ಮಾತನಾಡುವ ಸಾಧ್ಯತೆ ಇದೆ.
ಮೂಲಗಳ ಪ್ರಕಾರ, ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ್ದ ಸಂವಿಧಾನದ 370 ನೇ ವಿಧಿಯನ್ನು ರದ್ದುಪಡಿಸುವ ಸರ್ಕಾರದ ಐತಿಹಾಸಿಕ ನಿರ್ಧಾರದ ಬಗ್ಗೆ ಪ್ರಧಾನಿ ಮೋದಿ ವಿವರಿಸಲಿದ್ದಾರೆ ಎಂದು ಹೇಳಲಾಗಿದೆ.
ಈ ವಾರದ ಆರಂಭದಲ್ಲಿ ಸಂಸತ್ತಿನ ಉಭಯ ಸದನಗಳಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿರುವ 370 ನೇ ವಿಧಿಯನ್ನು ರದ್ದುಗೊಳಿಸುವ ಪ್ರಸ್ತಾಪವನ್ನು ಅಂಗೀಕರಿಸಲಾಗಿದ್ದು, ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಇದಕ್ಕೆ ಅಂಕಿತವನ್ನೂ ಹಾಕಿದ್ದಾರೆ.
ಜಮ್ಮು ಮತ್ತು ಕಾಶ್ಮೀರ (ಮರುಸಂಘಟನೆ) ಮಸೂದೆ 2019 ಅನ್ನು ಕೇಂದ್ರವು ಅಂಗೀಕರಿಸಿದೆ, ಇದು ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿದೆ. ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯನ್ನು ಹೊಂದಿದ ಮತ್ತು ಲಡಾಖ್ ವಿಧಾನಸಭೆಯಿಲ್ಲದ ಕೇಂದ್ರಾಡಳಿತ ಪ್ರದೇಶವಾಗಿದೆ. ವಿವಿಧ ರಾಜಕೀಯ ಪಕ್ಷಗಳ ತೀವ್ರ ವಿರೋಧದ ಮಧ್ಯೆಯೂ ಮಸೂದೆಯನ್ನು ಅನುಮೋದಿಸಲಾಗಿದ್ದು ಮೋದಿ ಸರ್ಕಾರಕ್ಕೆ ಸಿಕ್ಕ ಮಹತ್ವದ ಜಯವಾಗಿದೆ.
ಸ್ವಾತಂತ್ರ್ಯ ದಿನಾಚರಣೆಯಂದು ರಾಷ್ಟ್ರವನ್ನು ಉದ್ದೇಶಿಸಿ ಅವರು ಮಾಡಲಿರುವ ಭಾಷಣಕ್ಕೆ ಮುಂಚಿತವಾಗಿ ಅವರು ಇಂದು ಭಾಷಣ ಮಾಡಲಿರುವುದು ಮಹತ್ವವನ್ನು ಪಡೆದುಕೊಂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.