ನವದೆಹಲಿ: ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅಗಲುವಿಕೆಗೆ ದೇಶ ವಿದೇಶಗಳ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ. ಜಪಾನ್ ಮತ್ತು ಚೀನಾದ ರಾಯಭಾರಿಗಳೂ ಸ್ವರಾಜ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದು, ಗೌರವ ನಮನಗಳನ್ನು ಸಲ್ಲಿಸಿದ್ದಾರೆ.
ಪ್ರತಿಕ್ರಿಯೆ ನೀಡಿರುವ ಭಾರತದಲ್ಲಿನ ಜಪಾನ್ ರಾಯಭಾರಿ ಕೆಂಜಿ ಹಿರಮಟ್ಸು ಅವರು, “ಭಾರತದ ಮಾಜಿ ವಿದೇಶಾಂಗ ವ್ಯವಹಾರಗಳ ಸಚಿವ ಸುಷ್ಮಾ ಸ್ವರಾಜ್ ಅವರ ಹಠಾತ್ ನಿಧನದ ಬಗ್ಗೆ ನನಗೆ ತುಂಬಾ ಬೇಸರವಾಗಿದೆ. ಜಪಾನ್ ಸರ್ಕಾರ ಮತ್ತು ಜನರ ಪರವಾಗಿ ನಾನು ದುಃಖತಪ್ತ ಕುಟುಂಬ ಮತ್ತು ಭಾರತದ ಜನರಿಗೆ ಸಂತಾಪ ಸೂಚಿಸಲು ಬಯಸುತ್ತೇನೆ” ಎಂದಿದ್ದಾರೆ.
ಭಾರತದಲ್ಲಿನ ಚೀನಾದ ರಾಯಭಾರಿ ಸನ್ ವೀಡಾಂಗ್ ಅವರು ಟ್ವಿಟ್ಟರ್ನಲ್ಲಿ ದುಃಖವನ್ನು ಹಂಚಿಕೊಂಡಿದ್ದು, “ಭಾರತದ ಮಾಜಿ ವಿದೇಶಾಂಗ ಸಚಿವರಾದ ಶ್ರೀಮತಿ ಸುಷ್ಮ ಸ್ವರಾಜ್ ಅವರ ನಿಧನದ ಬಗ್ಗೆ ತಿಳಿದು ದುಃಖವಾಗಿದೆ. ಚೀನಾ ಮತ್ತು ಭಾರತ ಸಂಬಂಧಗಳಿಗೆ ಅವರು ನೀಡಿದ ಕೊಡುಗೆಗಳು ಶ್ಲಾಘನೀಯ. ಅವರ ಕುಟುಂಬಕ್ಕೆ ನನ್ನ ಆಳವಾದ ಸಂತಾಪವನ್ನು ವ್ಯಕ್ತಪಡಿಸುತ್ತೇನೆ” ಎಂದಿದ್ದಾರೆ.
ಬುಧವಾರ ಸುಷ್ಮಾ ಸ್ವರಾಜ್ ಅವರ ಅಂತ್ಯಕ್ರಿಯೆಯನ್ನು ದೆಹಲಿಯ ಲೋಧಿ ಚಿತಾಗಾರದಲ್ಲಿ ನೆರವೇರಿಸಲಾಗಿದೆ. ಇವರ ಅಗಲುವಿಕೆಗೆ ಟಿಬೆಟ್ ಧರ್ಮಗುರು ದಲೈಲಾಮ, ಅಲ್ಲಿನ ಪ್ರಧಾನಿ ಲೋಬ್ಸಂಗ್ ಸಂಗೈ ಸೇರಿದಂತೆ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.