ನವದೆಹಲಿ: ಭಾರತದ ಜೊತೆ ದ್ವಿಪಕ್ಷೀಯ ಸಂಬಂಧವನ್ನು ಕಡಿದುಕೊಂಡಿರುವ ಪಾಕಿಸ್ಥಾನದ ವಿರುದ್ಧ ಆಕ್ರೋಶವನ್ನು ವ್ಯಕ್ತಪಡಿಸಿರುವ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು, ಪಾಕಿಸ್ಥಾನದಂತಹ ನೆರೆಯ ರಾಷ್ಟ್ರ ಯಾರಿಗೂ ಸಿಗದಿರಲಿ ಎಂದು ದೇವರಲ್ಲಿ ಪ್ರಾರ್ಥಿಸಿಕೊಂಡಿದ್ದಾರೆ.
“ನಮ್ಮ ನೆರೆಹೊರೆಯವರ ಬಗ್ಗೆ ನಮಗೆ ಅತ್ಯಂತ ಆತಂಕವಿದೆ. ಸಮಸ್ಯೆಯೆಂದರೆ, ನಾವು ಸ್ನೇಹಿತರನ್ನು ಬದಲಾಯಿಸಬಹುದು ಆದರೆ ನಮ್ಮ ನೆರೆಹೊರೆಯವರನ್ನು ಆಯ್ಕೆ ಮಾಡುವುದು ಮತ್ತು ಪಕ್ಕದಲ್ಲಿ ಎಂತಹ ನೆರೆಹೊರೆಯವರು ಇರಬೇಕು ಎಂಬುದನ್ನು ಆಯ್ಕೆ ಮಾಡುವುದು ನಮ್ಮ ಕೈಯಲ್ಲಿ ಇರುವುದಿಲ್ಲ. ಆದರೆ ಯಾರೂ ಪಾಕಿಸ್ಥಾನದಂತಹ ನೆರೆಯವರನ್ನು ಪಡೆಯಬಾರದು ಎಂದು ನಾನು ದೇವರನ್ನು ಪ್ರಾರ್ಥಿಸುತ್ತೇನೆ” ಎಂದು ರಾಜನಾಥ್ ಸಿಂಗ್ ಅವರು ದೆಹಲಿಯಲ್ಲಿ ಮಾಜಿ ಸೇನಾ ಯೋಧರನ್ನು ಉದ್ದೇಶಿಸಿ ಮಾತನಾಡಿದ ಸಂದರ್ಭ ಹೇಳಿದ್ದಾರೆ.
ಎರಡು ನೆರೆಹೊರೆಯವರ ನಡುವಿನ ದ್ವಿಪಕ್ಷೀಯ ಸಂಬಂಧಗಳ ಬಗ್ಗೆ ಆತಂಕಕಾರಿಯಾದ ಚಿತ್ರಣವನ್ನು ಜಗತ್ತಿಗೆ ಪ್ರಸ್ತುತಪಡಿಸುವ ಪ್ರಯತ್ನವನ್ನು ಪಾಕಿಸ್ಥಾನದ ಮಾಡುತ್ತಿದೆ ಎಂದು ಭಾರತ ಆರೋಪಿಸಿದೆ. ಅಲ್ಲದೇ, ಪಾಕಿಸ್ಥಾನ ತನ್ನ ನಿರ್ಧಾರಗಳನ್ನು ಪರಿಶೀಲಿಸಬೇಕು ಎಂದು ಹೇಳಿದೆ.
ಬುಧವಾರ ಪಾಕಿಸ್ಥಾನವು ಇಸ್ಲಾಮಾಬಾದ್ನಲ್ಲಿರುವ ಭಾರತೀಯ ರಾಯಭಾರಿಯನ್ನು ಉಚ್ಛಾಟನೆಗೊಳಿಸಿದೆ ಮತ್ತು ಭಾರತದೊಂದಿಗಿನ ಸಂಬಂಧವನ್ನು ಕಡಿದುಕೊಳ್ಳುವುದು ಮತ್ತು ದ್ವಿಪಕ್ಷೀಯ ವ್ಯಾಪಾರವನ್ನು ಸ್ಥಗಿತಗೊಳಿಸುವುದಕ್ಕೆ ಸಂಬಂಧಿಸಿದಂತೆ ಐದು ಅಂಶಗಳನ್ನು ಅದು ಘೋಷಣೆ ಮಾಡಿದೆ.
ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಕೊನೆಗೊಳಿಸಿರುವ ಮತ್ತು ಅದನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸುವ ನರೇಂದ್ರ ಮೋದಿ ಸರ್ಕಾರದ ನಿರ್ಧಾರದ ವಿರುದ್ಧ ವಿಶ್ವಸಂಸ್ಥೆ ಭದ್ರತಾ ಮಂಡಳಿಗೆ ಮನವಿ ಮಾಡುವುದಾಗಿ ಪಾಕಿಸ್ಥಾನ ಹೇಳಿದೆ.
ಕಾಶ್ಮೀರ ಕ್ರಮವು “ಗಂಭೀರ ಪರಿಣಾಮಗಳನ್ನು” ಉಂಟುಮಾಡುತ್ತದೆ ಎಂದು ಪಾಕಿಸ್ಥಾನ ಪ್ರಧಾನಿ ಇಮ್ರಾನ್ ಖಾನ್ ಈ ಹಿಂದೆ ಎಚ್ಚರಿಸಿದ್ದರು. ಆದರೆ ಭಾರತ ಜಮ್ಮು ಕಾಶ್ಮೀರಕ್ಕೆ ಸಂಬಂಧಿಸಿದ ತನ್ನ ನಿರ್ಧಾರ ಸಂಪೂರ್ಣ ಆಂತರಿಕವಾದುದು ಎಂದು ಸ್ಪಷ್ಟ ಸಂದೇಶವನ್ನು ಪಾಕಿಸ್ಥಾನಕ್ಕೆ ರವಾನಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.