ಪುತ್ತೂರು: ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಬೆಳ್ಳಿಹಬ್ಬದ ಸವಿನೆನಪಿಗಾಗಿ ನಿರ್ಮಿಸಿರುವ ಗ್ರಂಥಾಲಯ ಕಟ್ಟಡ ಮತ್ತು ಇ-ಗ್ರಂಥಾಲಯ ಕಟ್ಟಡ ಉದ್ಘಾಟನೆ ಹಾಗೂ 27ನೇ ವಾರ್ಷಿಕೋತ್ಸವ ಏ.2ರಂದು ನಡೆಯಲಿದೆ ಎಂದು ಆಡಳಿತ ಮಂಡಳಿ ಅಧ್ಯಕ್ಷ ಕೆ.ಆರ್.ಆಚಾರ್ಯ ಹೇಳಿದರು.
ಬೆಳಗ್ಗೆ 7ಕ್ಕೆ ಗಣಪತಿ ಹವನ, ಸರಸ್ವತಿ ಪೂಜೆ ನಡೆಯಲಿದೆ. ನೂತನ ಕಟ್ಟಡವನ್ನು ಹಿರಿಯ ವಿದ್ಯಾರ್ಥಿ ಸಂಘ ಗೌರವಾಧ್ಯಕ್ಷ, ಒಡಿಯೂರು ಕ್ಷೇತ್ರ ಶ್ರೀ ಗುರುದೇವ ದತ್ತಪೀಠದ ಸಾಧ್ವಿ ಮಾತಾನಂದಮಯಿ ಉದ್ಘಾಟಿಸಲಿದ್ದಾರೆ. ಹುಬ್ಬಳ್ಳಿ ರಾಜ್ಯ ಕಾನೂನು ವಿವಿ ಕುಲಪತಿ ಡಾ.ಟಿ.ಆರ್.ಸುಬ್ರಹ್ಮಣ್ಯ ಇ-ಗ್ರಂಥಾಲಯ ಉದ್ಘಾಟಿಸುವರು. ಕರ್ನಾಟಕ ಲೋಕಾಯುಕ್ತ ಹಿರಿಯ ಸಿವಿಲ್ ನ್ಯಾಯಾಧೀಶ ಟಿ.ಗೋಪಾಲಕೃಷ್ಣ ರೈ ಬೆಳ್ಳಿಹಬ್ಬದ ಸ್ಮರಣಸಂಚಿಕೆ ಬಿಡುಗಡೆ ಮಾಡುವರು. ಶ್ಯಾಮ್ ಜ್ಯುವೆಲ್ಸ್ ಅಧ್ಯಕ್ಷ ಮತ್ತು ಆಡಳಿತ ನಿರ್ದೇಶಕ ಕೇಶವ ಪ್ರಸಾದ್ ಮುಳಿಯ, ಉಜಿರೆ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆ ನಿರ್ದೇಶಕ ಮನೋರಮ ಭಟ್, ವಿವೇಕಾನಂದ ವಿದ್ಯಾವರ್ಧಕ ಸಂಘ ಅಧ್ಯಕ್ಷ ಎಸ್.ಆರ್.ರಂಗಮೂರ್ತಿ ಅತಿಥಿಯಾಗಿರುವರು.
ವಿವೇಕಾನಂದ ಕಾನೂನು ಮಹಾವಿದ್ಯಾಲಯ ಬೆಳ್ಳಿಹಬ್ಬ ಸಮಿತಿ ಗೌರವಾಧ್ಯಕ್ಷ ಕೆ.ರಾಮ ಭಟ್ ಉರಿಮಜಲು ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
11 ಗಂಟೆಗೆ ನಡೆಯುವ ವಾರ್ಷಿಕೋತ್ಸವ ಹಾಗೂ ಹಿರಿಯ ವಿದ್ಯಾರ್ಥಿ ಸಂಘದ ದಿನಾಚರಣೆಯಲ್ಲಿ ದಾಂಡೇಲಿ ಸಿವಿಲ್ ನ್ಯಾಯಾಧೀಶ ವೇದಮೂರ್ತಿ ಬಿ.ಎಸ್, ತುಮಕೂರು ಸಿವಿಲ್ ನ್ಯಾಯಾಧೀಶ ಸವಿತಾ, ಬೆಂಗಳೂರು ಸಿಬಿಐ ನ್ಯಾಯಾಲಯ ಎಪಿಪಿ ಬಿ.ಆರ್.ಶಿವಾನಂದ ಪೆರ್ಲ, ವಕೀಲ ಸುಬ್ರಹ್ಮಣ್ಯ ಕುಮಾರ ಅಗರ್ತ, ವಿವೇಕಾನಂದ ವಿದ್ಯಾವರ್ಧಕ ಸಂಘ ಕಾರ್ಯದರ್ಶಿ ಇ.ಶಿವಪ್ರಸಾದ್ ಅತಿಥಿಯಾಗಿರುವರು. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದರು.
ವಿವೇಕಾನಂದ ವಿದ್ಯಾವರ್ಧಕ ಸಂಘ ಆಡಳಿತ ನಿರ್ದೇಶಕ ಪ್ರೊ.ಎ.ವಿ.ನಾರಾಯಣ, ವಿವೇಕಾನಂದ ಕಾನೂನು ಕಾಲೇಜು ಸಂಚಾಲಕ ಸಂತೋಷ್, ಪ್ರಾಂಶುಪಾಲ ಕೆ.ಜಿ.ಕೃಷ್ಣಮೂರ್ತಿ, ಬೆಳ್ಳಿಹಬ್ಬ ಸಮಿತಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.