ನವದೆಹಲಿ: ಜಮ್ಮು ಕಾಶ್ಮೀರದ ಶಾಂತಿಗೆ ಧಕ್ಕೆ ತರುವವರ ವಿರುದ್ಧ ತೀಕ್ಷ್ಣ ಕ್ರಮವನ್ನು ಜರುಗಿಸುವುದಾಗಿ ಭಾರತೀಯ ಸೇನೆ ಎಚ್ಚರಿಕೆಯನ್ನು ನೀಡಿದೆ. ಸಂವಿಧಾನದ 370ನೇ ವಿಧಿಯನ್ನು ರದ್ದುಪಡಿಸಿದ ಬೆಳವಣಿಗೆಗೆ ಸಂಬಂಧಿಸಿದಂತೆ ಈ ಎಚ್ಚರಿಕೆಯನ್ನು ಸೇನೆ ನೀಡಿದೆ.
ಕಾಶ್ಮೀರದ ಬಗ್ಗೆ ಭಾರತ ತೆಗೆದುಕೊಂಡಿರುವ ನಿರ್ಧಾರದ ವಿರುದ್ಧ ಪಾಕಿಸ್ಥಾನದ ರಾಜಕೀಯ ನಾಯಕತ್ವ ಮತ್ತು ಅಲ್ಲಿನ ಮಿಲಿಟರಿ ಬೆದರಿಕೆಯ ಹೇಳಿಕೆಯನ್ನು ನೀಡುತ್ತಿರುವ ಹಿನ್ನಲೆಯಲ್ಲಿ ಈ ಎಚ್ಚರಿಕೆಯನ್ನು ಸೇನೆ ನೀಡಿದೆ.
ಚಿನಾರ್ ಕಾರ್ಪ್ಸ್ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಕೆಜೆಎಸ್ ಧಿಲ್ಲಾನ್ ಸಂದರ್ಶನವನ್ನು ನೀಡಿದ ವೇಳೆ, “ಪಾಕಿಸ್ಥಾನ ಮತ್ತು ಅದರ ಸೈನ್ಯವು ಕಣಿವೆಯಲ್ಲಿ ಶಾಂತಿಯನ್ನು ಭಂಗಗೊಳಿಸುವ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದೆ ಮತ್ತು ಅವರು ಮುಂದೆಯೂ ಅದನ್ನು ನಿರಂತರಗೊಳಿಸುತ್ತಾರೆ ಎಂದು ನನಗೆ ತಿಳಿಸಿದೆ. ಇತ್ತೀಚೆಗೆ ಅವರು ನೀಡುತ್ತಿರುವ ಹೇಳಿಕೆಗಳು ಕಣಿವೆಯಲ್ಲಿ ಅಶಾಂತಿಗೆ ಕಾರಣವಾಗುತ್ತಿದೆ. ಅವರು ಬಹಿರಂಗವಾಗಿ ಬೆದರಿಕೆ ಹಾಕುವ ಕಾರ್ಯವನ್ನು ಮಾಡುತ್ತಿದ್ದಾರೆ. ಆದರೆ ನಾವು ಅವೆಲ್ಲವನ್ನೂ ನೋಡಿಕೊಳ್ಳುತ್ತೇವೆ. ಯಾರಾದರೂ ಬಂದು ಕಣಿವೆಯಲ್ಲಿನ ಶಾಂತಿಯನ್ನು ಭಂಗಗೊಳಿಸಲು ಪ್ರಯತ್ನಿಸಿದರೆ, ನಾವು ಅವರನ್ನು ನಿರ್ಮೂಲನೆ ಮಾಡುತ್ತೇವೆ” ಎಂದಿದ್ದಾರೆ.
ಕಳೆದ ವಾರ ಭಾರತೀಯ ಸೇನೆಯು ನಿಯಂತ್ರಣ ರೇಖೆಯ ಉದ್ದಕ್ಕೂ ಕ್ಲಸ್ಟರ್ ಬಾಂಬ್ಗಳನ್ನು ಬಳಸಿದೆ ಎಂಬ ಪಾಕಿಸ್ಥಾನದ ಹೇಳಿಕೆಯನ್ನು ಚಿನಾರ್ ಕಾರ್ಪ್ಸ್ ಕಮಾಂಡರ್ ತಿರಸ್ಕರಿಸಿದ್ದು, ಇದನ್ನು ಪಾಕಿಸ್ಥಾನದ ಅಪಪ್ರಚಾರ ಎಂದು ಬಣ್ಣಿಸಿದ್ದಾರೆ.
ಪಾಕಿಸ್ಥಾನ ಸೇನೆಯು ಮತ್ತೆ ಕದನ ವಿರಾಮವನ್ನು ಉಲ್ಲಂಘಿಸಿದರೆ, ಭಾರತೀಯ ಸೇನೆಯು ಕಠಿಣವಾಗಿ ಮತ್ತು ಪೂರ್ಣ ಬಲದಿಂದ ಪ್ರತಿಕ್ರಿಯಿಸುತ್ತದೆ ಎಂದು ಧಿಲ್ಲನ್ ಎಚ್ಚರಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.