ನವದೆಹಲಿ: ಕ್ವಿಟ್ ಇಂಡಿಯಾ ಚಳವಳಿಯ 77 ನೇ ವರ್ಷಾಚರಣೆಯ ಹಿನ್ನಲೆಯಲ್ಲಿ ಶುಕ್ರವಾರ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಸ್ವಾತಂತ್ರ್ಯ ಹೋರಾಟಗಾರರನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಭಿನಂದಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರು ಸ್ವಾತಂತ್ರ್ಯ ಹೋರಾಟಗಾರರನ್ನು ಈ ಸಂದರ್ಭದಲ್ಲಿ ಭೇಟಿಯಾಗಿ ಅಭಿನಂದಿಸಿದರು.
ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್, ಗೃಹ ಸಚಿವ ಅಮಿತ್ ಶಾ, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಈ ವೇಳೆ ಉಪಸ್ಥಿತರಿದ್ದರು.
ಕ್ವಿಟ್ ಇಂಡಿಯಾ ಚಳುವಳಿ ಭಾರತೀಯ ಸ್ವಾತಂತ್ರ್ಯ ಹೋರಾಟದಲ್ಲಿ ಒಂದು ಪ್ರಮುಖ ಮೈಲಿಗಲ್ಲು. ಮಹಾತ್ಮ ಗಾಂಧಿಯವರ ನೇತೃತ್ವದಲ್ಲಿ, ಭಾರತದಾದ್ಯಂತ ಜನರು ಸಾಮ್ರಾಜ್ಯಶಾಹಿಯ ವಿರುದ್ಧ ಒಗ್ಗೂಡಿದ ಐತಿಹಾಸಿಕ ಆಂದೋಲನ ಇದಾಗಿದೆ. 1942 ರಲ್ಲಿ ಈ ದಿನದಂದು, ಬ್ರಿಟಿಷರನ್ನು ದೇಶದಿಂದ ಓಡಿಸಲು ಗಾಂಧಿ ಎಲ್ಲಾ ಭಾರತೀಯರಿಗೆ ಮಾಡು ಇಲ್ಲವೇ ಮಡಿ ಎಂಬ ಸ್ಪಷ್ಟ ಕರೆಯನ್ನು ನೀಡಿದ್ದರು.
ಮುಂಬಿಯನ ಗವಾಲಿಯಾ ಟ್ಯಾಂಕ್ನಿಂದ ಚಳುವಳಿ ಪ್ರಾರಂಭವಾಗಿತ್ತು. ಈ ದಿನವನ್ನು ಪ್ರತಿ ವರ್ಷ ಆಗಸ್ಟ್ ಕ್ರಾಂತಿ ದಿನವಾಗಿ ಆಚರಿಸಲಾಗುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.