ನವದೆಹಲಿ: ಬಿಜೆಪಿ ಮುಂಬರುವ ವಿಧಾನಸಭಾ ಚುನಾವಣೆಗಳಿಗೆ ಸಿದ್ಧತೆಗಳನ್ನು ಮಾಡಿಕೊಳ್ಳಲಾರಂಭಿಸಿದೆ, ಸೆಪ್ಟಂಬರ್-ಅಕ್ಟೋಬರ್ ತಿಂಗಳಲ್ಲಿ ವಿಧಾನಸಭಾ ಚುನಾವಣೆಗಳನ್ನು ಎದುರಿಸಲಿರುವ ನಾಲ್ಕು ರಾಜ್ಯಗಳಲ್ಲಿ ಚುನಾವಣಾ ಉಸ್ತುವಾರಿಗಳನ್ನು ಮತ್ತು ಅವರಿಗೆ ಸಹಾಯಕರನ್ನು ನೇಮಿಸಿಕೊಂಡಿದೆ.
ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಅವರಿಗೆ ದೆಹಲಿಯ ಉಸ್ತುವಾರಿಯನ್ನು ನೀಡಲಾಗಿದೆ, ಪಕ್ಷದ ಪ್ರಧಾನ ಕಾರ್ಯದರ್ಶಿ ಭೂಪೇಂದ್ರ ಯಾದವ್ ಅವರಿಗೆ ಮಹಾರಾಷ್ಟ್ರದ ಉಸ್ತುವಾರಿಯನ್ನು ನೀಡಲಾಗಿದೆ. ಇವರಿಬ್ಬರಿಗೂ ಹೆಚ್ಚುವರಿಯಾಗಿ ಎರಡು ಉಪ ಉಸ್ತುವಾರಿಗಳನ್ನು ನೀಡಲಾಗಿದೆ. ಮಹಾರಾಷ್ಟ್ರ ಅಕ್ಟೋಬರ್ ತಿಂಗಳಲ್ಲಿ ಚುನಾವಣೆ ಎದುರಿಸಲಿದೆ. 2020ರ ಫೆಬ್ರವರಿಯಲ್ಲಿ ದೆಹಲಿಗೆ ಚುನಾವಣೆ ನಡೆಯಲಿದೆ.
ಕೇಂದ್ರ ವಸತಿ ಸಚಿವ ಹರ್ದೀಪ್ ಸಿಂಗ್ ಪುರಿ ಮತ್ತು ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರಾಯ್ ಅವರು ಉಪ ಉಸ್ತುವಾರಿಗಳಾಗಿ ಜಾವ್ಡೇಕರ್ ಅವರಿಗೆ ಸಹಾಯ ಮಾಡಲಿದ್ದಾರೆ.
ಉತ್ತರಪ್ರದೇಶದ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ, ಕರ್ನಾಟಕ ಬಿಜೆಪಿ ನಾಯಕ ಲಕ್ಷ್ಮಣ್ ಸವದಿ ಅವರುಗಳು ಭೂಪೇಂದ್ರ ಹೂಡಾ ಅವರಿಗೆ ಉಪ ಉಸ್ತುವಾರಿಗಳಾಗಿ ಸಹಾಯ ಮಾಡಲಿದ್ದಾರೆ.
ಅಕ್ಟೋಬರ್ ತಿಂಗಳಲ್ಲಿ ಹರಿಯಾಣದಲ್ಲೂ ಚುನಾವಣೆ ನಡೆಯಲಿದ್ದು, ಅಲ್ಲಿನ ಬಿಜೆಪಿ ಚುನಾವಣಾ ಉಸ್ತುವಾರಿಯಾಗಿ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರನ್ನು ನೇಂಕ ಮಾಡಲಾಗಿದೆ. ಇವರಿಗೆ ಜಾಟ್ ನಾಯಕ ಭೂಪೇಂದ್ರ ಸಿಂಗ್ ಉಪ ಉಸ್ತವಾರಿಯಾಗಿ ಸಹಾಯ ಮಾಡಲಿದ್ದಾರೆ.
ಬಿಜೆಪಿಯ ಉಪಾಧ್ಯಕ್ಷ ಓಂ ಮಾಥುರ್ ಅವರನ್ನು ಝಾರ್ಖಾಂಡ್ ಬಿಜೆಪಿ ಚುನಾವಣಾ ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ. ಇವರಿಗೆ ಬಿಹಾರ ಸಚಿವ ನಂದ ಕಿಶೋರ್ ಯಾದವ್ ಉಪ ಉಸ್ತುವಾರಿಯಾಗಿ ಸಹಾಯ ಮಾಡಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.