ರಾಯ್ಪುರ: ಛತ್ತೀಸ್ಗಢದ ರಾಜಧಾನಿ ರಾಯ್ಪುರದಲ್ಲಿ ಭಾನುವಾರ ಸಾವಿರಾರು ವಿದ್ಯಾರ್ಥಿಗಳು ಮತ್ತು ವಿವಿಧ ಸಮಾಜ ಸೇವಾ ಸಂಘಟನೆಗಳ ಸದಸ್ಯರು ಸೇರಿ 15 ಕಿಲೋಮೀಟರ್ ಉದ್ದದ ತ್ರಿವರ್ಣಧ್ವಜವನ್ನು ಹಿಡಿದುಕೊಂಡು ಮಾನವ ಸರಪಳಿಯನ್ನು ರಚನೆ ಮಾಡಿದ್ದಾರೆ. ಸ್ವಾತಂತ್ರ್ಯ ದಿನಾಚರಣೆಯ ಹಿನ್ನಲೆಯಲ್ಲಿ ಈ ಮಾನವ ಸರಪಳಿಯನ್ನು ರಚನೆ ಮಾಡಲಾಗಿದ್ದು, ಇಲ್ಲಿ ಬಳಸಲಾದ ತ್ರಿವರ್ಣ ಧ್ವಜ ಅತೀ ಉದ್ದದ ತ್ರಿವರ್ಣ ಧ್ವಜ ಎಂದು ಚಾಂಪಿಯನ್ಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ಗೆ ಪ್ರವೇಶವನ್ನು ಪಡೆದುಕೊಂಡಿದೆ.
ವಸುದೈವ ಕುಟುಂಬಕಂ ಫೌಂಡೇಶನ್ ಆಯೋಜಿಸಿದ್ದ ಈ ಕಾರ್ಯಕ್ರಮವು ಅತೀ ಉದ್ದದ ತ್ರಿವರ್ಣಧ್ವಜಕ್ಕಾಗಿ ಚಾಂಪಿಯನ್ಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಪ್ರವೇಶಿಸಿದೆ ಎಂದು ಸರ್ಕಾರಿ ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಛತ್ತೀಸ್ಗಢದ ರಾಜ್ಯಾದ್ಯಂತ 35 ಸಾಮಾಜಿಕ ಸಂಸ್ಥೆಗಳ ಸದಸ್ಯರು ಮತ್ತು ವಿವಿಧ ಶಾಲೆಗಳ ವಿದ್ಯಾರ್ಥಿಗಳು ಸೇರಿದಂತೆ ಸಾವಿರಾರು ಜನರು ಅಮಾಪರ ಚೌಕ್ನಿಂದ ಪಂಡಿತ್ ರವಿಶಂಕರ್ ಶುಕ್ಲಾ ವಿಶ್ವವಿದ್ಯಾಲಯದವರೆಗೆ ಮಾನವ ಸರಪಳಿಯನ್ನು ರಚಿಸಿ 15 ಕಿ.ಮೀ ಉದ್ದದ ತ್ರಿವರ್ಣವನ್ನು ಹಿಡಿದುಕೊಂಡರು ಎಂದು ಅದು ಹೇಳಿದೆ.
ಈ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ, ಮುಖ್ಯಮಂತ್ರಿ ಭೂಪೇಶ್ ಬಾಗೆಲ್ ಯುದ್ಧದಲ್ಲಿ ಮಡಿದ ಸೈನಿಕರ ಕುಟುಂಬಗಳನ್ನು ಸನ್ಮಾನಿಸಿದ್ದಾರೆ. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ರಮಣ್ ಸಿಂಗ್ ಮತ್ತು ಅಜಿತ್ ಜೋಗಿ, ರಾಜ್ಯ ಸಂಪುಟ ಸಚಿವರುಗಳು, ಶಾಸಕರು ಮತ್ತು ಇತರ ಸಾರ್ವಜನಿಕ ಪ್ರತಿನಿಧಿಗಳು ಉಪಸ್ಥಿತರಿದ್ದರು ಎಂದು ಪ್ರಕಟನೆ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.