ನವದೆಹಲಿ: ಕಾಶ್ಮೀರ ಪರಿಸ್ಥಿತಿಯ ಬಗ್ಗೆ ಅಧಿಕೃತವಲ್ಲದ ಮತ್ತು ದುರುದ್ದೇಶಪೂರಿತ ವಿಷಯಗಳನ್ನು ಹರಡುವ ಟ್ವಿಟರ್ ಖಾತೆಗಳನ್ನು ಸ್ಥಗಿತಗೊಳಿಸುವಂತೆ ಎಲೆಕ್ಟ್ರಾನಿಕ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಟ್ವಿಟರ್ಗೆ ಪತ್ರ ಮುಖೇನ ಸೂಚನೆಯನ್ನು ನೀಡಿದೆ.
ಗೃಹ ವ್ಯವಹಾರಗಳ ಸಚಿವಾಲಯದ ಶಿಫಾರಸಿನ ಆಧಾರದ ಮೇಲೆ ಈ ಕೋರಿಕೆ ಪತ್ರವನ್ನು ಸಾಮಾಜಿಕ ಜಾಲತಾಣ ಸಂಸ್ಥೆಯಾದ ಟ್ವಿಟರಿಗೆ ಕಳುಹಿಸಿಕೊಡಲಾಗಿದೆ.
ಆಗಸ್ಟ್ 5 ರಿಂದ ಕೇಂದ್ರ ಸರ್ಕಾರವು ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಕೊನೆಗೊಳಿಸಲು ಮತ್ತು ಆ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಂಗಡಿಸಲು ನಿರ್ಧರಿಸಿದ್ದು, ಆ ಬಳಿಕದಿಂದ ಆ ರಾಜ್ಯದಲ್ಲಿ ಬಿಗಿ ಭದ್ರತೆಯನ್ನು ಹಾಕಲಾಗಿದೆ.
ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 69 (ಎ)ನ ಅಡಿಯಲ್ಲಿ ಟ್ವಿಟರಿಗೆ ಪತ್ರವನ್ನು ಬರೆಯಲಾಗಿದ್ದು, “ಭಾರತ ವಿರೋಧಿ ಹೇಳಿಕೆಗಳಿಗಾಗಿ” ಈ ಖಾತೆಯನ್ನು ನಿರ್ಬಂಧಿಸುವಂತೆ ಕೋರಲಾಗಿದೆ. ಈ ಸೆಕ್ಷನ್ ಯಾವುದೇ ಕಂಪ್ಯೂಟರ್ ಸಂಪನ್ಮೂಲಗಳ ಮೂಲಕ ಯಾವುದೇ ಮಾಹಿತಿಯು ಸಾರ್ವಜನಿಕ ಪ್ರವೇಶವನ್ನು ಪಡೆಯುವುದನ್ನು ನಿರ್ಬಂಧಿಸಲು ಸರ್ಕಾರಕ್ಕೆ ಅನುಮತಿಸುತ್ತದೆ.
ಸ್ವಾತಂತ್ರ್ಯ ದಿನಾಚರಣೆಯ ಮುನ್ನ ಕಣಿವೆಯ ಕೆಲವು ಭಾಗಗಳಲ್ಲಿ ಅಶಾಂತಿ ಸೃಷ್ಟಿಸಲು ಪ್ರಯತ್ನಿಸುತ್ತಿರುವ ಪ್ರತ್ಯೇಕತಾವಾದಿ ನಾಯಕರುಗಳು ಭಾರತ ವಿರೋಧಿ ವಿಷಯಗಳನ್ನು ಮತ್ತು ಕಾಶ್ಮೀರದ ಬಗ್ಗೆ ಸುಳ್ಳು ಹರಡುವ ಟ್ವಿಟರ್ ಹ್ಯಾಂಡಲ್ಗಳನ್ನು ನಿರ್ವಹಿಸುತ್ತಿದ್ದಾರೆ ಎಂದು ಸರ್ಕಾರ ಬಲವಾದ ಶಂಕೆಯನ್ನು ವ್ಯಕ್ತಪಡಿಸಿದೆ.
ಸ್ವಾತಂತ್ರ್ಯ ದಿನದಂದು ಕಾಶ್ಮೀರ ಕಣಿವೆಯ ಪ್ರತಿ ಪಂಚಾಯಿತಿಯಲ್ಲಿ ಧ್ವಜಾರೋಹಣ ಸಮಾರಂಭ ನಡೆಸಲೂ ಕೇಂದ್ರ ನಿರ್ಧರಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.