ನವದೆಹಲಿ: ಸಂವಿಧಾನದ 370 ನೇ ವಿಧಿಯನ್ನು ರದ್ದುಪಡಿಸಿದ ನಿರ್ಧಾರದ ನೇತೃತ್ವವನ್ನು ವಹಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಸ್ವಾತಂತ್ರ್ಯ ದಿನಾಚರಣೆಯಂದು ಶ್ರೀನಗರದ ಲಾಲ್ ಚೌಕ್ನಲ್ಲಿ ಭಾರತದ ತ್ರಿವರ್ಣವನ್ನು ಹಾರಿಸುವ ಮೂಲಕ ಕಾಶ್ಮೀರವನ್ನು ಸಂಯೋಜಿಸುವ ನಿಟ್ಟಿನಲ್ಲಿ ಇನ್ನೂ ಒಂದು ಹೆಜ್ಜೆ ಮುಂದೆ ಇಡಲಿದ್ದಾರೆ ಎಂದು ವರದಿಗಳು ತಿಳಿಸಿವೆ.
ಪ್ರಸ್ತುತ ಕಣಿವೆ ರಾಜ್ಯದಲ್ಲಿ ಭದ್ರತಾ ಪರಿಸ್ಥಿತಿಯನ್ನು ಪರಿಶೀಲನೆ ನಡೆಸುತ್ತಿರುವ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಕೂಡ ಈ ಕಾರ್ಯಕ್ರಮಕ್ಕೆ ಹಾಜರಾಗುವ ಸಾಧ್ಯತೆ ಇದೆ. ಶ್ರೀನಗರಕ್ಕೆ ಶಾ ಅವರ ಐತಿಹಾಸಿಕ ಭೇಟಿಯ ಹಿನ್ನಲೆಯಲ್ಲಿ ಉನ್ನತ ಮಟ್ಟದ ಭದ್ರತಾ ವ್ಯವಸ್ಥೆಗಳನ್ನು ಕಲ್ಪಿಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಶಾ ಅವರು ಶೀಘ್ರದಲ್ಲೇ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿಯನ್ನು ನೀಡಲಿದ್ದಾರೆ ಎಂಬ ಬಗ್ಗೆ ಗೃಹ ಸಚಿವಾಲಯದ ಅಧಿಕಾರಿಗಳು ಖಚಿತಪಡಿಸಿದ್ದಾರೆ, ಆದರೆ ಯಾವ ದಿನ ಅವರು ಭೇಟಿಯನ್ನು ನೀಡಲಿದ್ದಾರೆ ಎಂಬ ಬಗ್ಗೆ ಯಾವುದೇ ಸ್ಪಷ್ಟ ಮಾಹಿತಿಯನ್ನು ನೀಡಲು ನಿರಾಕರಿಸಿದ್ದಾರೆ ಎಂದು ವರದಿಗಳು ಹೇಳಿವೆ.
“ಇದು ಭದ್ರತಾ ಕಾಳಜಿಯ ವಿಷಯವಾಗಿದೆ. ಭಾರತ ಮತ್ತು ಪಾಕಿಸ್ಥಾನದ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ಈ ಸಂದರ್ಭದಲ್ಲಿ, ಗೃಹ ಸಚಿವರ ಭೇಟಿಯನ್ನು ಮುಂಚಿತವಾಗಿ ಬಹಿರಂಗಪಡಿಸಲು ಸಾಧ್ಯವಿಲ್ಲ ”ಎಂದು ಗೃಹ ಸಚಿವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎನ್ನಲಾಗಿದೆ.
ಶ್ರೀನಗರದಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸುವುದು ಪ್ರಸ್ತುತ ಬಿಜೆಪಿಯ ಪ್ರಮುಖ ಗುರಿಯಾಗಿದೆ ಎಂದು ಹೇಳಲಾಗಿದೆ.
ಪ್ರಧಾನಿ ನರೇಂದ್ರ ಮೋದಿಯವರು 1992ರಲ್ಲಿ ಬಿಜೆಪಿ ಧುರೀಣ ಮುರಳಿ ಮನೋಹರ್ ಜೋಶಿ ಅವರೊಂದಿಗೆ ಶ್ರೀನಗರದ ಲಾಲ್ ಚೌಕ್ನಲ್ಲಿ ರಾಷ್ಟ್ರಧ್ವಜವನ್ನು ಹಾರಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.