ನವದೆಹಲಿ: ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಇಮ್ಯುನೊಲಾಜಿಯ ಮಾಜಿ ನಿರ್ದೇಶಕಿ ಚಂದ್ರಿಮಾ ಶಹಾ ಅವರು ಪ್ರತಿಷ್ಠಿತ ಭಾರತದ ರಾಷ್ಟ್ರೀಯ ವಿಜ್ಞಾನ ಅಕಾಡೆಮಿ (Indian National Science Academy (INSA)ಯ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಐಎನ್ಎಸ್ಎನ ಮೊದಲ ಮಹಿಳಾ ಅಧ್ಯಕ್ಷೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
2020 ರಿಂದ ಐಎನ್ಎಸ್ಎ ಮುಖ್ಯಸ್ಥರಾಗಿ ನೇಮಕಗೊಂಡಿರುವ ಶಹಾ ಅವರು, ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಜನಸಾಮಾನ್ಯರಲ್ಲಿ ವಿಜ್ಞಾನವನ್ನು ಇನ್ನಷ್ಟು ಜನಪ್ರಿಯಗೊಳಿಸುವ ಪ್ರಯತ್ನಗಳನ್ನು ಮಾಡುವುದಕ್ಕೆ ಆದ್ಯತೆ ನೀಡುವುದಾಗಿ ಮತ್ತು ವಿದೇಶಿ ಸಂಸ್ಥೆಗಳೊಂದಿಗೆ ಹೆಚ್ಚಿನ ಸಹಯೋಗವನ್ನು ಹೊಂದುವತ್ತ ಹೆಚ್ಚಿನ ಗಮನವನ್ನು ಹರಿಸುವುದಾಗಿ ಹೇಳಿಕೊಂಡಿದ್ದಾರೆ.
“ಜನಸಾಮಾನ್ಯರಲ್ಲಿ ವಿಜ್ಞಾನವನ್ನು ಜನಪ್ರಿಯಗೊಳಿಸಲು ಕ್ರಮಗಳನ್ನು ತೆಗೆದುಕೊಳ್ಳುವುದು ನನ್ನ ಮೊದಲ ಗುರಿಯಾಗಿದೆ. ನಮ್ಮ ಸ್ಥಳೀಯ ಅಧ್ಯಾಯಗಳು ಸಹ ಈ ನಿಟ್ಟಿನಲ್ಲಿ ಕ್ರಮಗಳನ್ನು ತೆಗೆದುಕೊಳ್ಳುತ್ತಿವೆ” ಎಂದು 66 ವರ್ಷದ ಶಹಾ ಹೇಳಿದ್ದಾರೆ.
1984 ರಲ್ಲಿ ಡಾಕ್ಟರೇಟ್ ಪದವಿಯನ್ನು ನಂತರ ಸಂಶೋಧನೆ ಮುಗಿಸಿ ವಿದೇಶದಿಂದ ಭಾರತಕ್ಕೆ ಮರಳಿದ ಶಹಾ, ಪ್ರಸ್ತುತ ಜೈವಿಕ ತಂತ್ರಜ್ಞಾನ ವಿಭಾಗದ ಅಧೀನದಲ್ಲಿರುವ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಇಮ್ಯುನೊಲಾಜಿ ಸಂಸ್ಥೆಯಲ್ಲಿ ಎಮಿನೆನ್ಸ್ ಪ್ರೊಫೆಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಭಾರತದಲ್ಲಿ ವಿಜ್ಞಾನವನ್ನು ಉತ್ತೇಜಿಸುವ ಮತ್ತು ಮಾನವೀಯತೆ ಮತ್ತು ರಾಷ್ಟ್ರೀಯ ಕಲ್ಯಾಣಕ್ಕಾಗಿ ವೈಜ್ಞಾನಿಕ ಜ್ಞಾನವನ್ನು ಬಳಸಿಕೊಳ್ಳುವ ಉದ್ದೇಶದಿಂದ ಜನವರಿ 1935 ರಲ್ಲಿ ಐಎನ್ಎಸ್ಎ ಸ್ಥಾಪಿಸಲಾಯಿತು. ಇದು ಸುಮಾರು 926 ಫೆಲೋಗಳನ್ನು ಹೊಂದಿದೆ.
ರಘುನಾಥ್ ಮಶೆಲ್ಕರ್ ಅವರಂತಹ ಖ್ಯಾತ ವಿಜ್ಞಾನಿಗಳು ಐಎನ್ಎಸ್ಎ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.