ನವದೆಹಲಿ: ಕ್ರಿಶ್ಚಿಯನ್ ಸಂಸ್ಥೆಗಳು ತಮ್ಮ ಹೆಣ್ಣುಮಕ್ಕಳ ಭವಿಷ್ಯಕ್ಕೆ ಸುರಕ್ಷಿತವಾಗಿಲ್ಲ ಎಂಬ ಭಾವನೆ ಪೋಷಕರಲ್ಲಿ ಸಾಮಾನ್ಯವಾಗಿದೆ ಎಂದು ಮದ್ರಾಸ್ ಹೈಕೋರ್ಟ್ ಶುಕ್ರವಾರ ಹೇಳಿದೆ.
“ಕ್ರಿಶ್ಚಿಯನ್ ಕಾಲೇಜುಗಳಲ್ಲಿನ ಕೋ-ಎಜುಕೇಶನ್ ತಮ್ಮ ಮಕ್ಕಳಿಗೆ ಅದರಲ್ಲೂ ಹೆಣ್ಣು ಮಕ್ಕಳ ಭವಿಷ್ಯಕ್ಕೆ ಅಸುರಕ್ಷಿತವಾಗಿದೆ ಎಂಬ ಭಾವ ಪೋಷಕರಲ್ಲಿ ಈಗ ಸಾಮಾನ್ಯವಾಗಿ ಬಿಟ್ಟಿದೆ” ಎಂದು ನ್ಯಾಯಮೂರ್ತಿ ಎಸ್. ವೈದ್ಯನಾಥನ್ ಹೇಳಿದ್ದಾರೆ.
ಮದ್ರಾಸ್ ಕ್ರಿಶ್ಚಿಯನ್ ಕಾಲೇಜಿನ ಅಸಿಸ್ಟೆಂಟ್ ಪ್ರೊಫೆಸರ್ ಸ್ಯಾಮ್ಯುವೆಲ್ ಟೆನಿಸನ್ ಅವರು ತಮ್ಮ ವಿರುದ್ಧ 34 ವಿದ್ಯಾರ್ಥಿನಿಯರ ವಿರುದ್ಧ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ವೇಳೆ ಈ ಅಭಿಪ್ರಾಯವನ್ನು ತಿಳಿಸಿದ್ದಾರೆ. ಆಂತರಿಕ ದೂರುಗಳ ಸಮಿತಿಯು ಶಿಫಾರಸ್ಸುಗಳನ್ನು ತಿರಸ್ಕರಿಸುವಂತೆ ಕೋರಿ ಟೆನಿಸನ್ ಅರ್ಜಿಯನ್ನು ಸಲ್ಲಿಸಿದ್ದರು.
ನ್ಯಾಯಾಧೀಶರು ಕ್ರಿಶ್ಚಿಯನ್ ಸಂಸ್ಥೆಗಳ ಇತರ ನಡವಳಿಕೆಯ ಬಗ್ಗೆಯೂ ಈ ವೇಳೆ ಅವಲೋಕನಗಳನ್ನು ಮಾಡಿದ್ದಾರೆ. ಇತರ ಧರ್ಮಗಳಿಗೆ ಸೇರಿದ ಜನರನ್ನು ಕಡ್ಡಾಯ ಮತಾಂತರ ಮಾಡುವ ಆರೋಪಗಳೂ ಈ ಸಂಸ್ಥೆಗಳ ಮೇಲಿದೆ ಎಂದು ಉಲ್ಲೇಖ ಮಾಡಿದ್ದಾರೆ.
“ಕ್ರಿಶ್ಚಿಯನ್ ಸಂಸ್ಥೆಗಳು ಉತ್ತಮ ಶಿಕ್ಷಣವನ್ನು ನೀಡಿದರೂ, ಅವುಗಳ ನೈತಿಕತೆಯ ಬೋಧನೆಗಳು ಮಿಲಿಯನ್ ಡಾಲರ್ ಪ್ರಶ್ನೆಗಳಾಗಿ ಉಳಿದಿವೆ” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.