ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಸ್ವಾತಂತ್ರ್ಯ ದಿನಾಚರಣೆಯಂದು ಐತಿಹಾಸಿಕ ಕೆಂಪುಕೋಟೆಯ ಮೇಲೆ ನಿಂತು ಮಾಡಿದ ಭಾಷಣವನ್ನು ಕನ್ನಡ, ತಮಿಳು, ಬಂಗಾಳಿ, ಮಲಯಾಳಂ ಸೇರಿದಂತೆ ವಿವಿಧ ಪ್ರಾದೇಶಿಕ ಭಾಷೆಗಳಲ್ಲಿ ಡಬ್ ಮಾಡಲಾಗಿದೆ.
ತಮ್ಮ ಭಾಷಣದ ತಮಿಳು, ತೆಲುಗು, ಮಲಯಾಳಂ, ಬಂಗಾಳಿ, ಕನ್ನಡ, ಅಸ್ಸಾಮಿ, ಒಡಿಯಾ ಮತ್ತು ಮರಾಠಿ ಆವೃತ್ತಿಗಳನ್ನು ಪ್ರಧಾನಿಯವರು ತಮ್ಮ ಟ್ವಿಟ್ಟರ್ ಹ್ಯಾಂಡಲ್ನಲ್ಲಿ ಹಂಚಿಕೊಂಡಿದ್ದಾರೆ.
ಆಲ್ ಇಂಡಿಯಾ ರೇಡಿಯೋ ಭಾಷಣವನ್ನು ಪ್ರಸಾರಗೊಳಿಸಲಿದೆ.
ಎರಡನೇ ಅವಧಿಗೆ ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಮೋದಿ ಅವರು ರಕ್ಷಣಾ ಮುಖ್ಯಸ್ಥರನ್ನು ರಚಿಸುವುದಾಗಿ ಘೋಷಿಸಿದ್ದಾರೆ ಮತ್ತು ಜನಸಂಖ್ಯೆಯ ಸ್ಫೋಟದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಮಾತ್ರವಲ್ಲದೇ ಕಾಶ್ಮೀರಕ್ಕೆ ಹೊಸ ಭರವಸೆಗಳನ್ನು ನೀಡಿದ್ದಾರೆ. ಏಕ ಬಳಕೆಯ ಪ್ಲಾಸ್ಟಿಕ್ ಬಳಕೆಯನ್ನು ನಿಲ್ಲಿಸಬೇಕು ಎಂದು ಜನರಿಗೆ ಮನವಿ ಮಾಡಿಕೊಂಡಿದ್ದಾರೆ.
ಮೋದಿಯವರು, ಕನ್ನಡದಲ್ಲಿ “ಐತಿಹಾಸಿಕ ಕೆಂಪುಕೋಟೆಯಿಂದ ನನ್ನ ಸಹ-ಭಾರತೀಯರನ್ನುದ್ದೇಶಿಸಿ ಮಾತನಾಡಲು ಗೌರವವೆನಿಸುತ್ತದೆ. ನನ್ನ ಭಾಷಣವನ್ನು ಕನ್ನಡದಲ್ಲಿ ಹಂಚಿಕೊಳ್ಳುತ್ತಿದ್ದೇನೆ” ಎಂದು ಒಕ್ಕಣೆಯನ್ನು ಬರೆದು ತಮ್ಮ ಕನ್ನಡ ಭಾಷಣವನ್ನು ಟ್ವಿಟರಿನಲ್ಲಿ ಹಂಚಿಕೊಂಡಿದ್ದಾರೆ.
ಹೀಗೆ ಪ್ರತಿಯೊಂದು ಭಾಷೆಯ ಭಾಷಣವನ್ನೂ ಆಯಾ ಭಾಷೆಯ ಒಕ್ಕಣೆಯೊಂದಿಗೆ ಮೋದಿ ಟ್ವಿಟರಿನಲ್ಲಿ ಹಂಚಿಕೊಂಡಿದ್ದಾರೆ.
ಐತಿಹಾಸಿಕ ಕೆಂಪುಕೋಟೆಯಿಂದ ನನ್ನ ಸಹ-ಭಾರತೀಯರನ್ನುದ್ದೇಶಿಸಿ ಮಾತನಾಡಲು ಗೌರವವೆನಿಸುತ್ತದೆ. ನನ್ನ ಭಾಷಣವನ್ನು ಕನ್ನಡದಲ್ಲಿ ಹಂಚಿಕೊಳ್ಳುತ್ತಿದ್ದೇನೆ. https://t.co/ouMwl4GH1C
— Narendra Modi (@narendramodi) August 16, 2019
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.