ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 75 ನೇ ಜನ್ಮ ದಿನಾಚರಣೆಯ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಗೌರವ ಸಲ್ಲಿಕೆ ಮಾಡಿದರು.
ಟ್ವಿಟರ್ ಮೂಲಕ ಪ್ರಧಾನಿ ಮೋದಿ, 1984 ಮತ್ತು 1989 ರ ನಡುವೆ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದ್ದ ಕಾಂಗ್ರೆಸ್ ನಾಯಕನನ್ನು ನೆನಪಿಸಿಕೊಂಡರು. “ನಮ್ಮ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಜನ್ಮ ದಿನಾಚರಣೆಯಂದು ಗೌರವಗಳನ್ನು ಸಲ್ಲಿಸುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷೆ ಮತ್ತು ರಾಜೀವ್ ಅವರ ಪತ್ನಿ ಸೋನಿಯಾ ಗಾಂಧಿ ಅವರು ವೀರ್ ಭೂಮಿಯಲ್ಲಿ ಇಂದು ಬೆಳಗ್ಗೆಯೇ ಗೌರವ ಸಲ್ಲಿಸಿದರು. ಅವರೊಂದಿಗೆ ಮಗ ರಾಹುಲ್, ಮಗಳು ಪ್ರಿಯಾಂಕಾ ಮತ್ತು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಇದ್ದರು.
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಕೂಡ ವೀರ್ ಭೂಮಿಯಲ್ಲಿ ರಾಜೀವ್ ಅವರಿಗೆ ಗೌರವ ಸಲ್ಲಿಸಿದರು.
ರಾಜೀವ್ ದಿವಂಗತ ಪ್ರಧಾನಿ ಇಂದಿರಾ ಗಾಂಧಿಯವರ ಪುತ್ರ ಮತ್ತು ಅವರ ರಾಜಕೀಯ ಉತ್ತರಾಧಿಕಾರಿಯಾಗಿದ್ದರು. ಅವರು ಭಾರತದ ಆರನೇ ಪ್ರಧಾನ ಮಂತ್ರಿಯಾಗಿದ್ದರು ಮತ್ತು ಮೊದಲು ಅಧಿಕಾರ ವಹಿಸಿಕೊಂಡಾಗ ಅವರು ಭಾರತದ ಅತ್ಯಂತ ಕಿರಿಯ ಪ್ರಧಾನ ಮಂತ್ರಿ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದರು.
1991 ರ ಮೇ 21 ರಂದು ಚುನಾವಣಾ ಪ್ರಚಾರದ ವೇಳೆ ಅವರನ್ನು ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿ ಎಲ್ಟಿಟಿಇ ಉಗ್ರರು ಹತ್ಯೆ ಮಾಡಿದ್ದರು.
Tributes to our former PM Shri Rajiv Gandhi on his birth anniversary.
— Narendra Modi (@narendramodi) August 20, 2019
ಇತರ ಗಣ್ಯರು ಮಾಜಿ ಪ್ರಧಾನಿಗೆ ಗೌರವ ಸಲ್ಲಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.