ನವದೆಹಲಿ: ಕಳೆದ ಹಣಕಾಸು ವರ್ಷದಲ್ಲಿ ನೈಸರ್ಗಿಕ ವಿಪತ್ತುಗಳಿಂದ ಪೀಡಿತಗೊಂಡಿದ್ದ ಕರ್ನಾಟಕ, ಒರಿಸ್ಸಾ ಮತ್ತು ಪಶ್ಚಿಮಬಂಗಾಳ ರಾಜ್ಯಗಳಿಗೆ ಕೇಂದ್ರವು ರೂ.4,432 ಕೋಟಿ ರೂಪಾಯಿಗಳ ನೆರವನ್ನು ನೀಡಿದೆ. ಇಂದು ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಉನ್ನತ ಮಟ್ಟದ ಸಭೆಯನ್ನು ನಡೆಸಿ ನೆರವನ್ನು ಬಿಡುಗಡೆಗೊಳಿಸಿದ್ದಾರೆ.
ಫೋನಿ ಚಂಡಮಾರುತದಿಂದ ಉಂಟಾದ ಹಾನಿಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ ನೇತೃತ್ವದ ಉನ್ನತ ಮಟ್ಟದ ಸಮಿತಿಯು ಒಡಿಶಾಗೆ 3,338.22 ಕೋಟಿ ರೂ.ಗಳ ಹೆಚ್ಚುವರಿ ಸಹಾಯವನ್ನು ನೀಡಲು ಅನುಮೋದಿಸಿದೆ ಎಂದು ಗೃಹ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.
ಕರ್ನಾಟಕ ಎದುರಿಸಿದ ಬರ ಪರಿಸ್ಥಿತಿಗಾಗಿ 1029.39 ಕೋಟಿ ರೂ.ಗಳನ್ನು ನೀಡಲಾಗಿದೆ, ಹಿಮಾಚಲ ಪ್ರದೇಶಕ್ಕೆ 2018-19ರ ಅವಧಿಯಲ್ಲಿ ಸಂಭವಿಸಿದ ಹಿಮಪಾತ ಮತ್ತು ಆಲಿಕಲ್ಲು ಮಳೆಗಾಗಿ 64.49 ಕೋಟಿ ರೂ.ಗಳನ್ನು ನೀಡಲಾಗಿದೆ.
ಈ ಹಣವನ್ನು ರಾಷ್ಟ್ರೀಯ ವಿಪತ್ತು ಸ್ಪಂದನಾ ನಿಧಿಯಿಂದ (ಎನ್ಡಿಆರ್ಎಫ್) ವಿತರಿಸಲಾಗುತ್ತಿದೆ.
ಈ ಹೆಚ್ಚುವರಿ ನೆರವು ಈಗಾಗಲೇ ರಾಜ್ಯಗಳಿಗೆ ಹಂಚಲು ಇರಿಸಲಾಗಿರುವ ರಾಜ್ಯ ವಿಪತ್ತು ಸ್ಪಂದನಾ ನಿಧಿಯಲ್ಲಿ (ಎಸ್ಡಿಆರ್ಎಫ್) ಕೇಂದ್ರ ಬಿಡುಗಡೆ ಮಾಡಿದ ನಿಧಿಗಿಂತ ಹೆಚ್ಚಿನದಾಗಿದೆ.
2018-19ರ ಅವಧಿಯಲ್ಲಿ ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳಿಗೆ 9,658 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದ್ದು, 2019-20ರ ಅವಧಿಯಲ್ಲಿ ಇದುವರೆಗೆ ಎಸ್ಡಿಆರ್ಎಫ್ನಿಂದ 24 ರಾಜ್ಯಗಳಿಗೆ 6,104 ಕೋಟಿ ರೂ. ಬಿಡುಗಡೆ ಮಾಡಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.