ನವದೆಹಲಿ: ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಮಾಜಿ ಹಣಕಾಸು ಸಚಿವ ಮತ್ತು ಹಿರಿಯ ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ ಅವರ ತುರ್ತು ಜಾಮೀನು ಅರ್ಜಿಯನ್ನು ವಿಚಾರಣೆಗೊಳಪಡಿಸಲು ಸುಪ್ರೀಂ ಕೋರ್ಟ್ ತಿರಸ್ಕರಿಸಿದ ಕೆಲವೇ ಗಂಟೆಗಳ ನಂತರ ಸಿಬಿಐ ಮತ್ತು ಜಾರಿ ನಿರ್ದೇಶನಾಲಯ (ಇಡಿ)ದ ಎರಡು ಪ್ರತ್ಯೇಕ ತಂಡಗಳು ಮಂಗಳವಾರ ರಾತ್ರಿ ದೆಹಲಿಯ ಜೋರ್ ಬಾಗ್ ನಲ್ಲಿನ ಚಿದಂಬರಂ ನಿವಾಸಕ್ಕೆ ಅವರನ್ನು ಬಂಧಿಸಲು ತೆರಳಿವೆ. ಆದರೆ, ಎರಡೂ ತಂಡಗಳು ವಿಫಲವಾಗಿವೆ.
ಅವರನ್ನು ಅವರ ನಿವಾಸದಲ್ಲಿ ಪತ್ತೆ ಮಾಡಲು ಸಾಧ್ಯವಾಗದ ಕಾರಣ ಸಿಬಿಐ ಅವರ ಮನೆಯ ಗೋಡೆಗಳಿಗೆ ಎರಡು ನೋಟಿಸ್ ಅನ್ನು ಅಂಟಿಸಿದ್ದು, ಮುಂದಿನ ಎರಡು ಗಂಟೆಗಳೊಳಗೆ ತಮ್ಮ ಮುಂದೆ ಹಾಜರಾಗುವಂತೆ ಕೇಳಿಕೊಂಡಿದೆ. ಐಎನ್ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿದಂಬರಂ ಅವರ ಎರಡೂ ಜಾಮೀನು ಅರ್ಜಿಗಳನ್ನು ದೆಹಲಿ ಹೈಕೋರ್ಟ್ ಮಂಗಳವಾರ ವಜಾಗೊಳಿಸಿತ್ತು.
“ಅಪರಾಧ ಸಂಹಿತೆ ಪ್ರಕ್ರಿಯೆಯ ಅಧ್ಯಾಯ XII ನೇ ಅಧ್ಯಾಯದಡಿಯಲ್ಲಿ ನಾನು ಈಗ ತನಿಖೆ ನಡೆಸುತ್ತಿರುವ ಪ್ರಕರಣದ ಸಂಗತಿಗಳು ಮತ್ತು ಸನ್ನಿವೇಶಗಳ ಬಗ್ಗೆ ನಿಮಗೆ ಪರಿಚಯವಿದೆ ಎಂದು ಭಾವಿಸಿದ್ದೇನೆ. ನೀವು ಈ ನೋಟಿಸ್ ಸ್ವೀಕರಿಸಿದ ಎರಡು ಗಂಟೆಗಳಲ್ಲಿ ನನ್ನ ಮುಂದೆ ಹಾಜರಾಗುವಂತೆ ನಿಮಗೆ ನಿರ್ದೇಶಿಸಲಾಗಿದೆ. ಪ್ರಕರಣದ ತನಿಖೆಯ ಉದ್ದೇಶಕ್ಕಾಗಿ ನೋಟಿಸ್ ನೀಡಿದ್ದೇನೆ” ಎಂದು ಸಿಬಿಐನ ಉಪ ಪೊಲೀಸ್ ವರಿಷ್ಠಾಧಿಕಾರಿ ಆರ್. ಪಾರ್ಥಸಾರಥಿ ಅವರು ಚಿದಂಬರಂಗೆ ನೀಡಿದ ನೋಟಿಸ್ ನಲ್ಲಿ ತಿಳಿಸಿದ್ದಾರೆ.
ಉನ್ನತ ವಕೀಲರಾದ ಕಪಿಲ್ ಸಿಬಲ್ ಮತ್ತು ಅಭಿಷೇಕ್ ಮನು ಸಿಂಗ್ವಿ ಅವರನ್ನೊಳಗೊಂಡ ಚಿದಂಬರಂ ಅವರ ಕಾನೂನು ತಂಡವು ಹೈಕೋರ್ಟ್ ಆದೇಶವನ್ನು ತಡೆಹಿಡಿಯುವಂತೆ ಬುಧವಾರ ಸುಪ್ರೀಂಕೋರ್ಟ್ನ ಹಿರಿಯ ನ್ಯಾಯಾಧೀಶರನ್ನು ಸಂಪರ್ಕಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.