ನವದೆಹಲಿ: ಪ್ಲಾಸ್ಟಿಕ್ ತ್ಯಾಜ್ಯವು ಸೃಷ್ಟಿಸುವ ಆತಂಕವನ್ನು ನಿವಾರಿಸಬೇಕೆಂಬ ಪ್ರಧಾನಿ ನರೇಂದ್ರ ಮೋದಿಯವರ ಕರೆಗೆ ಓಗೊಟ್ಟಿರುವ ಭಾರತೀಯ ರೈಲ್ವೆಯು ತನ್ನ ಎಲ್ಲಾ ವಲಯಗಳಿಗೂ 50 ಮೈಕ್ರಾನ್ಗಿಂತ ಕಡಿಮೆ ದಪ್ಪವಿರುವ ಏಕ ಬಳಕೆಯ ಪ್ಲಾಸ್ಟಿಕ್ಗಳ ಮೇಲೆ ನಿಷೇಧ ಹೇರುವಂತೆ ನಿರ್ದೇಶಿಸಿದೆ. 2019 ರ ಅಕ್ಟೋಬರ್ 2 ರಿಂದ ಈ ನಿಯಮವನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕೆಂದು ಸೂಚನೆಯನ್ನು ನೀಡಿದೆ.
ಪ್ರಯಾಣಿಕರಿಗೆ ಅನಾನುಕೂಲವಾಗಬಾರದು ಎಂಬ ಕಾರಣಕ್ಕೆ, ಮಾರಾಟಗಾರರಿಗೆ ಪ್ಲಾಸ್ಟಿಕ್ ಬದಲು ಪರ್ಯಾಯ ಮಾರ್ಗಗಳನ್ನು ಅನುಸರಿಸುವುದಕ್ಕೆ ಕಾಲಾವಕಾಶವನ್ನು ನೀಡುವ ಉದ್ದೇಶದಿಂದ ಒಂದು ತಿಂಗಳಿಗಿಂತಲೂ ಮುಂಚಿತವಾಗಿಯೇ ಭಾರತೀಯ ರೈಲ್ವೇ ಈ ಆದೇಶವನ್ನು ಹೊರಡಿಸಿದೆ. ಎಲ್ಲಾ ಮಾರಾಟಗಾರರು ಅಕ್ಟೋಬರ್ 2 ರಿಂದ ಏಕ ಬಳಕೆ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್ಗಳನ್ನು ಬಳಸುವುದನ್ನು ನಿಲ್ಲಿಸಬೇಕು ಎಂದು ಸೂಚನೆಯನ್ನು ನೀಡಲಾಗಿದೆ.
ಈ ಅಭಿಯಾನದ ನಿಟ್ಟಿನಲ್ಲಿ, ವಿಸ್ತೃತ ಉತ್ಪಾದಕ ಜವಾಬ್ದಾರಿಯ ಭಾಗವಾಗಿ ಐಆರ್ಸಿಟಿಸಿ ಪ್ಲಾಸ್ಟಿಕ್ ಕುಡಿಯುವ ನೀರಿನ ಬಾಟಲಿಗಳನ್ನು ಹಿಂದಕ್ಕೆ ಪಡೆಯುವ ಕಾರ್ಯ ಮಾಡಲಿದೆ ಮತ್ತು ಪ್ಲಾಸ್ಟಿಕ್ ಬಾಟಲ್ ಪುಡಿಮಾಡುವ ಯಂತ್ರಗಳನ್ನು ಮಾರಾಟಗಾರರಿಗೆ ತ್ವರಿತವಾಗಿ ಒದಗಿಸಲಿದೆ.
ಪ್ಲಾಸ್ಟಿಕ್ ಉತ್ಪನ್ನಗಳನ್ನು ಕಡಿಮೆ ಮಾಡಲು, ಮರುಬಳಕೆ ಮಾಡಲು ಮತ್ತು ತಿರಸ್ಕರಿಸಲು, ಅಗ್ಗದ ಮರುಬಳಕೆ ಮಾಡಬಹುದಾದ ಚೀಲಗಳನ್ನು ಬಳಸಲು ರೈಲ್ವೆ ತನ್ನ ಸಿಬ್ಬಂದಿಗೆ ನಿರ್ದೇಶನ ನೀಡಿದೆ. ಪ್ಲಾಸ್ಟಿಕ್ ವಿರುದ್ಧದ ಅಭಿಯಾನದ ಭಾಗವಾಗಿ ರೈಲ್ವೆಯು ತನ್ನ ಪ್ರಯಾಣಿಕರಿಗೆ, ಸಿಬ್ಬಂದಿಗೆ ಜಾಗೃತಿ ಮೂಡಿಸಲಿದ್ದು, ಮಾಹಿತಿ, ಶಿಕ್ಷಣ ಮತ್ತು ಸಂವಹನ ಕ್ರಮಗಳನ್ನು ಕೈಗೆತ್ತಿಕೊಳ್ಳಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.