ನವದೆಹಲಿ: ಕೇಂದ್ರ ಲೋಕಸೇವಾ ಆಯೋಗ(ಯುಪಿಎಸ್ಸಿ) 2014ರಲ್ಲಿ ಐಎಎಸ್ ಮತ್ತು ಐಪಿಎಸ್ ಹುದ್ದೆಗಳಿಗಾಗಿ ನಡೆಸಿದ್ದ ನಾಗರಿಕ ಸೇವಾ ಪರೀಕ್ಷೆಯ ಫಲಿತಾಂಶ ಶನಿವಾರ ಪ್ರಕಟಗೊಂಡಿದೆ. ಇಲ್ಲೂ ಮಹಿಳೆಯರೇ ಮೇಲುಗೈಯನ್ನು ಸಾಧಿಸಿದ್ದಾರೆ.
ಒಟ್ಟು 1,236 ಅಭ್ಯರ್ಥಿಗಳು ವಿವಿಧ ನಾಗರಿಕ ಸೇವೆಗಳಿಗೆ ಆಯ್ಕೆಯಾಗಿದ್ದಾರೆ. ವಿಶೇಷವೆಂದರೆ ಅಗ್ರ ಐದು ರ್ಯಾಂಕುಗಳ ಪೈಕಿ ನಾಲ್ವರು ಮಹಿಳೆಯರು.
ಇರಾ ಸಿಂಘಾಲ್, ರೇಣು ರಾಜ್, ನಿಧಿ ಗುಪ್ತಾ ಹಾಗೂ ವಂದನಾ ರಾವ್ ಅವರು ಕ್ರಮವಾಗಿ ಮೊದಲ ನಾಲ್ಕು ರ್ಯಾಂಕುಗಳನ್ನು ಪಡೆದು ಮಹತ್ವದ ಸಾಧನೆ ಮಾಡಿದ್ದಾರೆ.
ಆಯ್ಕೆಯಾದ 1,236 ಅಭ್ಯರ್ಥಿಗಳ ಪೈಕಿ 590 ಜನರು ಸಾಮಾನ್ಯ ವರ್ಗದವರು. 354 ಜನರು ಇತರೆ ಹಿಂದುಳಿದ ವರ್ಗಕ್ಕೆ ಸೇರಿದವರು.194 ಜನರು ಪರಿಶಿಷ್ಟ ಜಾತಿ ಹಾಗೂ 98ಮಂದಿ ಪರಿಶಿಷ್ಟ ಪಂಗಡಕ್ಕೆ ಸೇರಿದವರು ಎಂದು ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.