ನವದೆಹಲಿ: ಜಿ 7 ಶೃಂಗಸಭೆಯ ಸೈಡ್ಲೈನಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ರನ್ನು ಭೇಟಿ ಮಾಡಿ ವ್ಯಾಪಾರ, ರಕ್ಷಣಾ ಮತ್ತು ಇನ್ನೋವೇಶನ್ ವಿಷಯದ ಬಗ್ಗೆ ಮಾತುಕತೆ ನಡೆಸಿದರು. ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧವನ್ನು ಇನ್ನಷ್ಟು ಗಟ್ಟಿಗೊಳಿಸುವ ಮಾರ್ಗೋಪಾಯಗಳ ಬಗ್ಗೆ ಚರ್ಚಿಸಿದರು.
“ನಾವು ಪ್ರಧಾನಿ ಬೋರಿಸ್ ಜಾನ್ಸನ್ ಅವರ ಜೊತೆ ಒಂದು ಶ್ರೇಷ್ಠ ಸಭೆ ನಡೆಸಿದ್ದೇವೆ. ಈ ವೇಳೆ ನಾವು ವ್ಯಾಪಾರ, ರಕ್ಷಣಾ ಮತ್ತು ಇನ್ನೋವೇಶನ್ ಮುಂತಾದ ಕ್ಷೇತ್ರಗಳಲ್ಲಿ ಉಭಯ ದೇಶಗಳ ಸಂಬಂಧಗಳನ್ನು ಮತ್ತಷ್ಟು ಬೆಳೆಸುವ ಮಾರ್ಗಗಳ ಬಗ್ಗೆ ಚರ್ಚಿಸಿದ್ದೇವೆ. ಭಾರತ ಮತ್ತು ಯುನೈಟೆಡ್ ಕಿಂಗ್ಡಮ್ ಸಂಬಂಧಗಳು ದೃಢವಾಗಿದ್ದು ಇದು ನಮ್ಮ ನಾಗರಿಕರಿಗೆ ಹೆಚ್ಚು ಪ್ರಯೋಜನವನ್ನು ನೀಡುತ್ತದೆ ”ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ವಿದೇಶಾಂಗ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ಅವರು ಟ್ವೀಟ್ ಮಾಡಿ, “ಪ್ರಧಾನು ನರೇಂದ್ರ ಮೋದಿ ಅವರು ಜಿ -7 ಶೃಂಗಸಭೆಯ ಸೈಡ್ಲೈನಿನಲ್ಲಿ ಯುಕೆ ಪ್ರಧಾನಿ ಬೋರಿಸ್ ಜಾನ್ಸನ್ ಅವರೊಂದಿಗೆ ಫಲಪ್ರಧವಾದ ಸಭೆ ನಡೆಸಿದರು. ವ್ಯಾಪಾರ ಮತ್ತು ಹೂಡಿಕೆ, ರಕ್ಷಣಾ ಮತ್ತು ಭದ್ರತೆ, ಎಸ್ & ಟಿ ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ನಮ್ಮ ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವ ಬಗ್ಗೆ ಚರ್ಚೆಗಳು ಕೇಂದ್ರೀಕರಿಸಿದ್ದವು” ಎಂದಿದ್ದಾರೆ.
ಜಿ 7 ಶೃಂಗಸಭೆ ಸೌತ್ವೆಸ್ಟರ್ನ್ ಫ್ರೆಂಚ್ ನಗರದಲ್ಲಿ ನಡೆಯುತ್ತಿದೆ. ಕಳೆದ ತಿಂಗಳು ಜಾನ್ಸನ್ ಪ್ರಧಾನಿಯಾದ ನಂತರ ಉಭಯ ನಾಯಕರ ನಡುವಿನ ಮೊದಲ ಸಭೆ ಇದಾಗಿದೆ. ಭಾರತ ಸರ್ಕಾರವು ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ ಮತ್ತು ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿದ ಬಳಿಕ ಈ ಸಭೆ ನಡೆದಿರುವುದು ಮಹತ್ವದ್ದಾಗಿದೆ.
ಕಾಶ್ಮೀರ ಬಗೆಗಿನ ಸಮಸ್ಯೆಯನ್ನು ಭಾರತ ಮತ್ತು ಪಾಕಿಸ್ಥಾನ ದ್ವಿಪಕ್ಷೀಯವಾಗಿ ಮಾತುಕತೆ ನಡೆಸಿ ಬಗೆಹರಿಸಿಕೊಳ್ಳಬೇಕು ಎಂದು ಯುಕೆ ಪ್ರತಿಪಾದಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.