ನವದೆಹಲಿ: ಭ್ರಷ್ಟಾಚಾರ ಮತ್ತು ಇತರ ಆರೋಪಗಳನ್ನು ಹೊತ್ತುಕೊಂಡಿದ್ದ ಮತ್ತೆ 22 ಹಿರಿಯ ಅಧಿಕಾರಿಗಳನ್ನು ಕೇಂದ್ರೀಯ ಪರೋಕ್ಷ ತೆರಿಗೆ ಮತ್ತು ಕಸ್ಟಮ್ಸ್ ಮಂಡಳಿ (ಸಿಬಿಐಸಿ) ಕಡ್ಡಾಯವಾಗಿ ನಿವೃತ್ತಿ ಮಾಡಿದೆ.
ಕಡ್ಡಾಯ ನಿವೃತ್ತಿಗೆ ಒಳಗಾದ ಎಲ್ಲಾ ಅಧಿಕಾರಿಗಳು ಅಧೀಕ್ಷಕ / ಎಒ ಹುದ್ದೆಯಲ್ಲಿದ್ದಾರೆ.
“ತೆರಿಗೆ ಆಡಳಿತದಲ್ಲಿನ ಕೆಲವು ಬ್ಲ್ಯಾಕ್ ಶೀಪ್ಗಳು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಮತ್ತು ಪ್ರಮಾಣಿಕತೆಯನ್ನು ಟಾರ್ಗೆಟ್ ಮಾಡುವ ಮೂಲಕ ಮತ್ತು ಸಣ್ಣ ಪುಟ್ಟ ವಿಷಯಗಳಿಗೆ ದೊಡ್ಡ ಶಿಕ್ಷೆ ವಿಧಿಸುವ ಮೂಲಕ ತೆರಿಗೆದಾರರಿಗೆ ಕಿರುಕುಳ ನೀಡಿದ್ದಾರೆ. ಇಂತಹ ಕೃತ್ಯಗಳನ್ನು ನಾವೆಂದಿಗೂ ಸಹಿಸಿಕೊಳ್ಳುವುದಿಲ್ಲ, ಈ ಕಾರಣದಿಂದಾಗಿ ಆರೋಪಿತ ಅಧಿಕಾರಿಗಳಿಗೆ ಕಡ್ಡಾಯ ನಿವೃತ್ತಿಯನ್ನು ನೀಡುತ್ತೇವೆ” ಎಂದು ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಮತ್ತು ಕೆಲವು ಪತ್ರಿಕೆಗಳಿಗೆ ನೀಡಿದ ಸಂದರ್ಶನಗಳಲ್ಲಿ ಹೇಳಿಕೊಂಡಿದ್ದರು.
ಮೋದಿಯವರ ಮಾತಿಗೆ ಅನುಗುಣವಾಗಿಯೇ 22 ಹಿರಿಯ ಆರೋಪಿತ ಅಧಿಕಾರಿಗಳಿಗೆ ಕಡ್ಡಾಯ ನಿವೃತ್ತಿಯನ್ನು ನೀಡಿರುವುದಾಗಿ ಕೇಂದ್ರೀಯ ಪರೋಕ್ಷ ತೆರಿಗೆ ಮತ್ತು ಕಸ್ಟಮ್ಸ್ ಮಂಡಳಿ ಹೇಳಿದೆ.
ಕಳೆದ ಜೂನ್ ತಿಂಗಳಲ್ಲಿ ಮಂಡಳಿಯು 27 ಉನ್ನತ ಶ್ರೇಣಿಯ ಐಆರ್ಎಸ್ ಅಧಿಕಾರಿಗಳಿಗೆ ಭ್ರಷ್ಟಾಚಾರದ ಮತ್ತು ಇತರ ಆರೋಪಗಳ ಮೇರೆಗೆ ಕಡ್ಡಾಯ ನಿವೃತ್ತಿಯನ್ನು ನೀಡಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.