ನವದೆಹಲಿ: ಗುರುನಾನಕ್ ದೇವ್ ಅವರ 550 ನೇ ಜನ್ಮ ವರ್ಷಾಚರಣೆಯ ಸ್ಮರಣಾರ್ಥ ಕೇಂದ್ರ ಸರ್ಕಾರವು, ಸುಲ್ತಾನಪುರ ಲೋಧಿಯನ್ನು ಅಭಿವೃದ್ಧಿಪಡಿಸಲು ಮತ್ತು ಈ ನಗರದ ರೈಲ್ವೆ ನಿಲ್ದಾಣವನ್ನು ಮೇಲ್ದರ್ಜೆಗೇರಿಸಲು ನಿರ್ಧರಿಸಿದೆ.
ನಿಲ್ದಾಣದ ನವೀಕರಣ ಕಾರ್ಯವು ಪ್ರಸ್ತುತ ಭರದಿಂದ ಸಾಗಿದ್ದು, ಈ ವರ್ಷದ ಅಕ್ಟೋಬರ್ ವೇಳೆಗೆ ಕಾಮಗಾರಿಯನ್ನು ಪೂರ್ಣಗೊಳಿಸಲು ನಿರ್ಧರಿಸಲಾಗಿದೆ.
“ಗುರುನಾನಕ್ ದೇವ್ ಜಿ ಅವರ 550 ನೇ ಜನ್ಮ ವರ್ಷಾಚರಣೆಯ ಸ್ಮರಣಾರ್ಥ, ಅವರು ಜೀವನದ ಬಹುಭಾಗವನ್ನು ಕಳೆದ ನಗರವನ್ನು ಅಭಿವೃದ್ಧಿಪಡಿಸಲು ಭಾರತ ಸರ್ಕಾರ ನಿರ್ಧರಿಸಿದೆ. ಸುಲ್ತಾನಪುರ ಲೋಧಿ ರೈಲ್ವೆ ನಿಲ್ದಾಣದ ನವೀಕರಣ ಕಾರ್ಯಗಳು ಭರದಿಂದ ಸಾಗುತ್ತಿವೆ ಮತ್ತು 2019ರ ಅಕ್ಟೋಬರ್ ವೇಳೆಗೆ ಕಾಮಗಾರಿ ಪೂರ್ಣಗೊಳ್ಳಲಿದೆ” ಎಂದು ಸಂಸ್ಕೃತಿ ಸಚಿವಾಲಯ ಸೋಮವಾರ ಟ್ವೀಟ್ ಮಾಡಿದೆ.
ಆಗಸ್ಟ್ 24 ರಂದು ಕೇಂದ್ರ ಸಚಿವ ಹರ್ಸಿಮ್ರತ್ ಕೌರ್ ಬಾದಲ್ ಅವರು, ಗುರುನಾನಕ್ ದೇವ್ ಅವರ 550 ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಸುಲ್ತಾನಪುರ ಲೋಧಿಯನ್ನು ಬಿಳಿ ಬಣ್ಣಕ್ಕೆ ತಿರುಗಿಸುವುದಾಗಿ ಹೇಳಿದ್ದರು. ಅಲ್ಲದೇ ಈ ಕಾರ್ಯವನ್ನು ಕಾರ್ಯಗತಗೊಳಿಸಲು ಸಿಖ್ ಸಂಗತ್ ಸಹಾಯವನ್ನು ಪಡೆಯುವುದಾಗಿ ಹೇಳಿದ್ದರು.
ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ನಗರದಲ್ಲಿ ಪಾರಂಪರಿಕ ಸಂಕೀರ್ಣವನ್ನು ಸ್ಥಾಪನೆ ಮಾಡುತ್ತಿದೆ ಎಂದು ಅವರು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.