ಕೋಲ್ಕತ್ತಾ: ಪಶ್ಚಿಮಬಂಗಾಳದ ನಾಡಿಯಾ ಜಿಲ್ಲಿಯಲ್ಲಿ ನಡೆದ 71 ವರ್ಷದ ಕ್ರೈಸ್ಥ ಸನ್ಯಾಸಿನಿಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬುಧವಾರ ನಾಲ್ಕು ಮಂದಿ ಬಾಂಗ್ಲಾದೇಶಿ ವಲಸಿಗರನ್ನು ಬಂಧಿಸಿದ್ದಾರೆ.
ಈ ನಾಲ್ವರು ಆರೋಪಿಗಳನ್ನು ಪಂಜಾಬ್ನ ಲೋಧಿಯಾನದ ಮೋತಿನಗರ್ ಪ್ರದೇಶದಿಂದ ಬಂಧಿಸಲಾಗಿದೆ. ಇದಕ್ಕೂ ಮುನ್ನ ಸಿಐಡಿ ಇಬ್ಬರು ಆರೋಪಿಗಳನ್ನು ಬಂಧಿಸಿತ್ತು.
ಕಾನ್ವೆಂಟ್ಗೆ ನುಗ್ಗಿದ್ದ ದುಷ್ಕರ್ಮಿಗಳು ಕ್ರೈಸ್ಥ ಸನ್ಯಾಸಿನಿಯನ್ನು ಅತ್ಯಾಚಾರ ಮಾಡಿದಲ್ಲದೇ ಬೀರುವಿನಲ್ಲಿದ್ದ ೧೨ ಲಕ್ಷ ನಗದನ್ನು ದೋಚಿ ಪರಾರಿಯಾಗಿದ್ದರು. ಈ ಘಟನೆಗೆ ದೇಶದಾದ್ಯಂತ ಭಾರೀ ಖಂಡನೆ ವ್ಯಕ್ತವಾಗಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.