ನವದೆಹಲಿ: ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ ಅನ್ನು ಗೆದ್ದು ಭಾರತದ ಕೀರ್ತಿ ಪತಾಕೆಯನ್ನು ಹಾರಿಸಿರುವ ಪಿ.ವಿ ಸಿಂಧು ಅವರು ಮಂಗಳವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ನವದೆಹಲಿಯಲ್ಲಿ ಭೇಟಿಯಾದರು.
ಈ ವೇಳೆ ಮಾತನಾಡಿದ ಮೋದಿ, ಪಿ.ವಿ ಸಿಂಧು ಅವರನ್ನು ಭಾರತದ ಹೆಮ್ಮೆ ಮತ್ತು ಆಕೆ ಭಾರತಕ್ಕೆ ಚೊಚ್ಚಲ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ ಅನ್ನು ತಂದು ಕೊಡುವ ಮೂಲಕ ದೇಶದ ಘನತೆಯನ್ನು ಎತ್ತರಕ್ಕೆ ಕೊಂಡೊಯ್ದಿದ್ದಾಳೆ ಎಂದರು.
ಮೋದಿಯನ್ನು ಭೇಟಿಯಾಗುವುದಕ್ಕೂ ಮುನ್ನ ಪಿ.ವಿ ಸಿಂಧು ಅವರು ಕೇಂದ್ರ ಯುವಜನ ಮತ್ತು ಕ್ರೀಡಾ ಸಚಿವ ಕಿರನ್ ರಿಜ್ಜು ಅವರನ್ನು ಭೇಟಿಯಾಗಿದ್ದಾರೆ. ಈ ವೇಳೆ ಸಚಿವರು ಆಕೆಗೆ 10 ಲಕ್ಷ ರೂಪಾಯಿಗಳ ಚೆಕ್ ಅನ್ನು ಹಸ್ತಾಂತರ ಮಾಡಿದ್ದಾರೆ.
ಭಾನುವಾರ ನಡೆದ ಫೈನಲ್ನಲ್ಲಿ ಜಪಾನ್ನ ನೊಜೋಮಿ ಒಕುಹರಾ ಅವರನ್ನು 21-7, 21-7 ಸೆಟ್ಗಳಿಂದ ಸೋಲಿಸುವ ಮೂಲಕ ವಿಶ್ವ ಚಾಂಪಿಯನ್ಶಿಪ್ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಸಿಂಧು ಪಾತ್ರರಾಗಿದ್ದಾರೆ.
ಗೆಲುವಿನ ನಂತರ, ಸಿಂಧು ಮಂಗಳವಾರ ಮುಂಜಾನೆ ಭಾರತಕ್ಕೆ ಬಂದರು ಮತ್ತು ದೆಹಲಿ ವಿಮಾನನಿಲ್ದಾಣದಲ್ಲಿ ನೆರೆದಿದ್ದ ಅವರ ಅಪಾರ ಬೆಂಬಲಿಗರು ಅವರಿಗೆ ಅಭುತಪೂರ್ವವಾದ ಸ್ವಾಗತವನ್ನು ಕೋರಿದ್ದಾರೆ. ಈ ವೇಳೆ ಅಭಿಮಾನಿಗಳಿಗೆ ಧನ್ಯವಾದಗಳನ್ನು ಅರ್ಪಿಸಿದ ಸಿಂಧು, ದೇಶಕ್ಕಾಗಿ ಇನ್ನೂ ಅನೇಕ ಪದಕಗಳನ್ನು ಗೆಲ್ಲಲು ಬಯಸುತ್ತೇನೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.