ನವದೆಹಲಿ: ದೆಹಲಿಯ ಫಿರೋಝ್ ಶಾ ಕೋಟ್ಲಾ ಸ್ಟೇಡಿಯಂಗೆ ದಿವಂಗತ ಬಿಜೆಪಿ ಮುಖಂಡ ಅರುಣ್ ಜೇಟ್ಲಿ ಅವರ ಹೆಸರನ್ನು ಮರುನಾಮಕರಣ ಮಾಡಲು ದಿಲ್ಲಿ ಆ್ಯಂಡ್ ಡಿಸ್ಟ್ರಿಕ್ಟ್ ಕ್ರಿಕೆಟ್ ಅಸೋಸಿಯೇಶನ್ (ಡಿಡಿಸಿಎ) ನಿರ್ಧರಿಸಿದೆ. ದೆಹಲಿಯ ಪ್ರಸಿದ್ಧ ಕ್ರಿಕೆಟ್ ಸ್ಟೇಡಿಯಂನ ಮರುನಾಮಕರಣ ಸೆಪ್ಟೆಂಬರ್ 12 ರಂದು ನಡೆಯಲಿದ್ದು, ಈ ವೇಳೆ ಸ್ಟೇಡಿಯಂನಲ್ಲಿನ ಸ್ಟ್ಯಾಂಡ್ ಒಂದಕ್ಕೆ ಭಾರತದ ಕ್ರಿಕೆಟ್ ತಂಡ ನಾಯಕ ವಿರಾಟ್ ಕೊಹ್ಲಿ ಅವರ ಹೆಸರನ್ನೂ ಇಡಲಾಗುತ್ತಿದೆ.
ನಾಮಕರಣ ಸಮಾರಂಭವು ಜವಾಹರಲಾಲ್ ನೆಹರು ಕ್ರೀಡಾಂಗಣದಲ್ಲಿ ನಡೆಯಲಿದ್ದು, ಈ ಸಮಾರಂಭದಲ್ಲಿ ಗೃಹ ಸಚಿವ ಅಮಿತ್ ಶಾ ಮತ್ತು ಕ್ರೀಡಾ ಸಚಿವ ಕಿರಣ್ ರಿಜ್ಜು ಭಾಗವಹಿಸಲಿದ್ದಾರೆ.
1999 ರಿಂದ 2013 ರವರೆಗೆ ಜೇಟ್ಲಿ ಡಿಡಿಸಿಎ ಅಧ್ಯಕ್ಷರಾಗಿದ್ದರು ಮತ್ತು ತಮ್ಮ ಅಧಿಕಾರಾವಧಿಯಲ್ಲಿ ಅವರು ಕ್ರೀಡಾಂಗಣವನ್ನು ನವೀಕರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಜೇಟ್ಲಿ ಕೈಗೊಂಡ ಕ್ರಮಗಳು ಹೆಚ್ಚಿನ ಅಭಿಮಾನಿಗಳಿಗೆ ಸ್ಥಳಾವಕಾಶ ಒದಗಿಸುವ ನಿಟ್ಟಿನಲ್ಲಿ ಕ್ರೀಡಾಂಗಣದ ಸಾಮರ್ಥ್ಯವನ್ನು ಹೆಚ್ಚಳಕ್ಕೆ ಕಾರಣವಾಯಿತು. ಈ ಕ್ರೀಡಾಂಗಣದಲ್ಲಿ ವಿಶ್ವ ದರ್ಜೆಯ ಡ್ರೆಸ್ಸಿಂಗ್ ಕೊಠಡಿಗಳನ್ನು ನಿರ್ಮಿಸಿದ ಕೀರ್ತಿಗೆ ಜೇಟ್ಲಿ ಪಾತ್ರರಾಗಿದ್ದರು.
ಜೇಟ್ಲಿ ನಾಲ್ಕು ಬಾರಿ ರಾಜ್ಯಸಭೆಯ ಸದಸ್ಯರಾಗಿದ್ದರು ಮತ್ತು ಅವರು 2000 ರಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸರ್ಕಾರದಲ್ಲಿ ಕ್ಯಾಬಿನೆಟ್ ಸಚಿವರಾಗಿದ್ದರು. ಅವರು 2009-2014ರ ಅವಧಿಯಲ್ಲಿ ರಾಜ್ಯಸಭೆಯಲ್ಲಿ ಪ್ರತಿಪಕ್ಷದ ನಾಯಕರಾಗಿದ್ದರು. ಮೋದಿ ಸರ್ಕಾರದ ಮೊದಲ ಅವಧಿಯಲ್ಲಿ ಜೇಟ್ಲಿ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವರಾಗಿದ್ದರು ಮತ್ತು ರಕ್ಷಣಾ ಮತ್ತು ಮಾಹಿತಿ ಮತ್ತು ಪ್ರಸಾರ ಖಾತೆಗಳನ್ನು ಸಹ ನಿಭಾಯಿಸಿದ್ದರು.
ಅವರು ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕಳೆದ ಶನಿವಾರ ತಮ್ಮ 66 ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.