ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಬೆಳಿಗ್ಗೆ ಮಾಜಿ ಕೇಂದ್ರ ಸಚಿವ ದಿವಂಗತ ಅರುಣ್ ಜೇಟ್ಲಿಯವರ ಮನೆಗೆ ತೆರಳಿ ಅಗಲಿದ ಸ್ನೇಹಿತನಿಗೆ ಗೌರವಾರ್ಪಣೆ ಮಾಡಿದರು ಮತ್ತು ಅವರು ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಬಿಜೆಪಿಯ ಅತಿ ಉನ್ನತ ನಾಯಕರಲ್ಲಿ ಒಬ್ಬರಾದ ಜೇಟ್ಲಿ ಶನಿವಾರ ನಿಧನರಾಗಿದ್ದು, ಈ ವೇಳೆ ಪ್ರಧಾನಿ ಮೋದಿ ಅಧಿಕೃತ ವಿದೇಶ ಪ್ರವಾಸದಲ್ಲಿದ್ದರು. ಹೀಗಾಗಿ ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಲು ಅವರಿಗೆ ಸಾಧ್ಯವಾಗಲಿಲ್ಲ.
ಪ್ರಧಾನಿ ಮೋದಿ ಅವರು ಕಳೆದ ರಾತ್ರಿ ತಮ್ಮ ಮೂರು ರಾಷ್ಟ್ರಗಳ ಪ್ರವಾಸವನ್ನು ಮುಕ್ತಾಯಗೊಳಿಸಿ ಇಂದು ಬೆಳಗ್ಗೆ ಭಾರತಕ್ಕೆ ಆಗಮಿಸಿದ್ದಾರೆ. ಬಳಿಕ ಜೇಟ್ಲಿ ಅವರ ಸೌತ್ ದಿಲ್ಲಿಯಲ್ಲಿನ ನಿವಾಸಕ್ಕೆ ತೆರಳಿ ಕುಟುಂಬ ಸದಸ್ಯರಿಗೆ ಸಾಂತ್ವನವನ್ನು ಹೇಳಿದರು.
ಪ್ರಧಾನಿ ಮೋದಿ ಅವರು ಜೇಟ್ಲಿಗೆ ಅವರ ನಿವಾಸದಲ್ಲಿ ಗೌರವ ಸಲ್ಲಿಸಿದರು ಮತ್ತು ಅವರ ಪತ್ನಿ ಸಂಗೀತಾ ಜೇಟ್ಲಿ, ಮಗ ರೋಹನ್ ಮತ್ತು ಮಗಳು ಸೋನಾಲಿ ಅವರಿಗೆ ಸಂತಾಪ ಸೂಚಿಸಿದರು. ಅವರು ಕುಟುಂಬದೊಂದಿಗೆ 40 ನಿಮಿಷವಿದ್ದರು.
ಬಿಜೆಪಿಯ ರಾಜಕೀಯ ಹರಿಯ ಮತ್ತು ಕಾರ್ಯತಂತ್ರಜ್ಞ ಜೇಟ್ಲಿ ಅವರು ಏಮ್ಸ್ ಆಸ್ಪತ್ರೆಯಲ್ಲಿ ಶನಿವಾರ ನಿಧನರಾದರು. ಆಗಸ್ಟ್ 9 ರಿಂದ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದರು.
Went to the residence of late Arun Jaitley Ji. Spent time with his family members.
Destiny took Arun Ji away from us too soon but the good work he has done for India will remain immortal. pic.twitter.com/fBOOLgdqaK
— Narendra Modi (@narendramodi) August 27, 2019
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.