ಬೆಂಗಳೂರು: ಭಾರತ ಕಂಡ ಸಾರ್ವಕಾಲಿಕ ಶ್ರೇಷ್ಠ ಹಾಕಿ ಆಟಗಾರ ಮೇಜರ್ ಧ್ಯಾನ್ ಚಂದ್ ಅವರ ಹುಟ್ಟು ಹಬ್ಬದ ಪ್ರಯುಕ್ತವಾಗಿ ದೇಶಾದ್ಯಂತ ಇಂದು ರಾಷ್ಟ್ರೀಯ ಕ್ರೀಡಾ ದಿನವನ್ನು ಆಚರಿಸಲಾಗುತ್ತಿದೆ. ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ವಿಧಾನಸೌಧದಲ್ಲಿ ಮೇಜರ್ ಧ್ಯಾನ್ ಚಂದ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿದರು ಮತ್ತು ಹಾಕಿ ಆಡುವ ಮೂಲಕ ಕ್ರೀಡಾ ದಿನದ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು.
ಈ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಸಚಿವರುಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
ಈ ವೇಳೆ ಮಾತನಾಡಿದ ಮುಖ್ಯಮಂತ್ರಿಗಳು, “ರಾಜ್ಯದಲ್ಲಿ ಕ್ರೀಡೆಯ ಉತ್ತೇಜನಕ್ಕಾಗಿ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತರುವ ನಿಟ್ಟಿನಲ್ಲಿ ಕಾರ್ಯನಿರತವಾಗಿದೆ. ಶೀಘ್ರದಲ್ಲಿಯೇ ಕ್ರೀಡೆಗೆ ಸಂಬಂಧಿಸಿದ ಎಲ್ಲಾ ಯೋಜನೆಗಳನ್ನು ಜಾರಿಗೆ ತರಲಿದ್ದೇವೆ. ಮೋದಿ ಅವರ ಮಹತ್ವಾಕಾಂಕ್ಷೆಯ ಫಿಟ್ ಇಂಡಿಯಾ ಅಭಿಯಾನವನ್ನು ನಾವೆಲ್ಲರು ಸೇರಿ ಯಶಸ್ವಿಗೊಳಿಸಬೇಕಿದೆ” ಎಂದರು.
ಹಾಕಿ ಆಡುವ ಮೂಲಕ ಅವರು ಕ್ರೀಡಾಸ್ತಕರಲ್ಲಿ ಉತ್ಸಾಹವನ್ನು ಮೂಡಿಸಿದರು. ಈ ವೇಳೆ ಕ್ರೀಡಾಪಟು ಪ್ರಕಾಶ್ ನಂಜಪ್ಪ, ಸಲ್ಮಾನ್ ಪಾಷಾ, ಅರ್ಚನಾ ಕಾಮತ್ ಸಮಾರಂಭದಲ್ಲಿ ಉಪಸ್ಥಿತರಿದ್ದು, ಯುವ ಕ್ರೀಡಾಪಟುಗಳಿಗೆ ಉತ್ಸಾಹ ತುಂಬಿದರು. ಕೆಲ ಸಚಿವರು, ಶಾಸಕರು, ಯುವ ಕ್ರೀಡಾಳುಗಳೊಂದಿಗೆ ವಿವಿಧ ಕ್ರೀಡಾ ಚಟುವಟಿಕೆಗಳಲ್ಲಿ ಭಾಗಿಯಾದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.