ಬೆಂಗಳೂರು: ಕರ್ನಾಟಕದ ಪ್ರಾದೇಶಿಕ ಸಂಪರ್ಕಕ್ಕೆ ಪ್ರಮುಖ ಉತ್ತೇಜನವನ್ನು ನೀಡಲು ಮುಂದಾಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರವು, ರಾಜ್ಯದಾದ್ಯಂತ ಕನಿಷ್ಠ 15 ಸಣ್ಣ ವಿಮಾನ ನಿಲ್ದಾಣಗಳನ್ನು ಅಭಿವೃದ್ಧಿಪಡಿಸಲು ಸಜ್ಜಾಗಿದೆ ಎಂದು ಮೂಲಗಳು ತಿಳಿಸಿವೆ.
ವರದಿಯ ಪ್ರಕಾರ, ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ (ಕೆಎಸ್ಐಐಡಿಸಿ) ಅಧಿಕಾರಿಗಳು ವಿಮಾನ ನಿಲ್ದಾಣಗಳನ್ನು ಅಭಿವೃದ್ಧಿಪಡಿಸಲು ಮತ್ತು ಈ ಉದ್ದೇಶಕ್ಕಾಗಿ ವಿಶೇಷ ವಾಹಕವನ್ನು ಸ್ಥಾಪಿಸಲು ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರದ (ಎಎಐ) ಅಧಿಕಾರಿಗಳೊಂದಿಗೆ ಮಾತುಕತೆಯನ್ನು ನಡೆಸುತ್ತಿದ್ದಾರೆ.
“ಪ್ರಾದೇಶಿಕ ವಾಯು ಸಂಪರ್ಕವನ್ನು ಸುಧಾರಿಸುವ ಸಲುವಾಗಿ, ಕರ್ನಾಟಕದಲ್ಲಿ 15 ವಿಮಾನ ನಿಲ್ದಾಣಗಳನ್ನು ಅಭಿವೃದ್ಧಿಪಡಿಸುವ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ಸರ್ಕಾರ ಮತ್ತು ಎಎಐ ನಡುವೆ ಮಾತುಕತೆ ನಡೆಯುತ್ತಿದೆ. ಈ ಯೋಜನೆ ಒಂದೆರಡು ತಿಂಗಳಲ್ಲಿ ಪ್ರಾರಂಭವಾಗಬಹುದು” ಎಂದು ಎಎಐ ಕಾರ್ಯನಿರ್ವಾಹಕ ನಿರ್ದೇಶಕ ಆನಂದ್ ಜಿ ಜೋಶಿ ಹೇಳಿದ್ದಾರೆ.
ಕರ್ನಾಟಕದ ಮೂಲಸೌಕರ್ಯ ವಿಭಾಗದ ಪ್ರಧಾನ ಕಾರ್ಯದರ್ಶಿ ಕಪಿಲ್ ಮೋಹನ್ ಅವರ ಪ್ರಕಾರ, ಈ ಯೋಜನೆಗಾಗಿ ಹೆಚ್ಚಿನ ಭೂಸ್ವಾಧೀನವನ್ನು ಈಗಾಗಲೇ ರಾಜ್ಯ ಆಡಳಿತವು ಪೂರ್ಣಗೊಳಿಸಿದೆ ಮತ್ತು ಮೊದಲ ಹಂತದ ಕಾಮಗಾರಿಯನ್ನು ಒಂದು ವರ್ಷದೊಳಗೆ ಪೂರ್ಣಗೊಳಿಸಲು ನಿರ್ಧರಿಸಲಾಗಿದೆ.
ಸಣ್ಣ ವಿಮಾನ ನಿಲ್ದಾಣಗಳು ರಾಯಚೂರು, ಹಾಸನ, ಕಾರವಾರ, ವಿರಾಜ್ಪೇಟೆ, ಕೋಲಾರ, ಯಾದಗಿರಿ, ಬಳ್ಳಾರಿ ಮತ್ತು ಇತರ ಸ್ಥಳಗಳಲ್ಲಿ ಸ್ಥಾಪನೆಯಾಗಲಿವೆ.
38 ಕೋಟಿ ರೂ.ಗಳ ವೆಚ್ಚದಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಗ್ರೀನ್ಫೀಲ್ಡ್ ವಿಮಾನ ನಿಲ್ದಾಣವನ್ನು ಅಭಿವೃದ್ಧಿಪಡಿಸುವ ಪ್ರಸ್ತಾಪಕ್ಕೆ ಕರ್ನಾಟಕ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದ ನಂತರ ಈ ಬೆಳವಣಿಗೆ ನಡೆದಿದೆ. ಶಿವಮೊಗ್ಗ ಜಿಲ್ಲೆ ಸಿಎಂ ಯಡಿಯೂರಪ್ಪ ಅವರ ತವರೂರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.