ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಕೊನೆಗೊಳಿಸಿದ ನಿರ್ಧಾರ ಭಾರತದ ಆಂತರಿಕ ವಿಷಯವಾಗಿದೆ ಮತ್ತು ಕಾಶ್ಮೀರ ಸಮಸ್ಯೆಯನ್ನು ನವದೆಹಲಿ ಮತ್ತು ಇಸ್ಲಾಮಾಬಾದ್ ದ್ವಿಪಕ್ಷೀಯವಾಗಿ ಬಗೆಹರಿಸಬೇಕು ಎಂದು ಎಂದು ನವದೆಹಲಿಯಲ್ಲಿರುವ ಆಸ್ಟ್ರೇಲಿಯಾದ ಹೈಕಮಿಷನರ್ ಹರೀಂದರ್ ಸಿಧು ಶುಕ್ರವಾರ ಹೇಳಿದ್ದಾರೆ.
“ತನ್ನ ನಿರ್ಧಾರವನ್ನು ಆಂತರಿಕ ವಿಷಯ ಎಂದು ಭಾರತ ಸರ್ಕಾರ ಹೇಳಿದೆ. ಈ ಬಗೆಗಿನ ಭಾರತದ ನಿಲುವನ್ನು ನಾವು ಗೌರವಿಸುತ್ತೇವೆ. ಕಾಶ್ಮೀರ ವಿಷಯವನ್ನು ಭಾರತ ಮತ್ತು ಪಾಕಿಸ್ಥಾನ ದ್ವಿಪಕ್ಷೀಯವಾಗಿ ಪರಿಹರಿಸಿಕೊಳ್ಳಬೇಕು ಎಂಬುದು ಆಸ್ಟ್ರೇಲಿಯಾದ ದೀರ್ಘಕಾಲದ ದೃಷ್ಟಿಕೋನವಾಗಿದೆ: ಎಂದು ಎಂ.ಎಸ್. ಸಿಧು ಹೇಳಿದ್ದಾರೆ.
“ಕಾಶ್ಮೀರ ಪ್ರದೇಶವು ಸ್ಥಿರಗೊಳ್ಳಲಿದೆ ಮತ್ತು ಶಾಂತಿಯುತವಾಗಲಿದೆ ಮತ್ತು ಅಲ್ಲಿ ಆರ್ಥಿಕ ಅಭಿವೃದ್ಧಿಯು ಸಂಭವಿಸಲಿದೆ. ಈ ಪ್ರಕ್ರಿಯೆಯಲ್ಲಿ ಎರಡೂ ದೇಶಗಳು ಸಂಯಮದಿಂದ ವರ್ತಿಸುತ್ತವೆ ಮತ್ತು ಕಾಶ್ಮೀರ ಜನರ ಸುರಕ್ಷತೆಗೆ ಆದ್ಯತೆ ನೀಡುತ್ತವೆ ಎಂದು ನಾವು ಭಾವಿಸುತ್ತೇವೆ” ಎಂದು ಅವರು ಹೇಳಿದ್ದಾರೆ.
ಕಾಶ್ಮೀರದ ವಿಷಯದಲ್ಲಿ ಭಾರತದ ನಿಲುವನ್ನು ಬಹುತೇಕ ಎಲ್ಲಾ ರಾಷ್ಟ್ರಗಳು ಬೆಂಬಲಿಸಿವೆ. ಆದರೆ ಪಾಕಿಸ್ಥಾನ ಮಾತ್ರ ಚೀನಾದ ಬೆಂಬಲದೊಂದಿಗೆ ಈ ವಿಷಯವನ್ನು ಅಂತಾರಾಷ್ಟ್ರೀಕರಣಗೊಳಿಸಲು ಇನ್ನಿಲ್ಲದಂತೆ ಪ್ರಯತ್ನಗಳನ್ನು ನಡೆಸುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.