ನವದೆಹಲಿ: ಅಸ್ಸಾಂ ಪೌರತ್ವ ನೋಂದಣಿ (ಎನ್ಆರ್ಸಿ) ಯ ಮಾದರಿಯಲ್ಲೇ ದೆಹಲಿಗೂ ಎನ್ಆರ್ಸಿ ಅನ್ನು ತರಬೇಕು ಎಂದು ಬಿಜೆಪಿ ಮುಖಂಡ ಮನೋಜ್ ತಿವಾರಿ ಒತ್ತಾಯಿಸಿದ್ದಾರೆ. ರಾಜಧಾನಿಯ ಪರಿಸ್ಥಿತಿ ಅಪಾಯಕಾರಿಯಾಗಿದೆ ಎಂದಿರುವ ಅವರು, ಅಕ್ರಮ ವಲಸಿಗರ ಪತ್ತೆಗೆ ಎನ್ಆರ್ಸಿ ಅನಿವಾರ್ಯ ಎಂದಿದ್ದಾರೆ.
“ದೆಹಲಿಯ ಪರಿಸ್ಥಿತಿ ತುಂಬಾ ಅಪಾಯಕಾರಿಯಾಗುತ್ತಿದೆ, ಹೀಗಾಗಿ ಎನ್ಆರ್ಸಿ ಅನ್ನು ತರುವುದು ಅವಶ್ಯಕವಾಗಿದೆ. ಇಲ್ಲಿ ನೆಲೆಸಿದ ಅಕ್ರಮ ವಲಸಿಗರು ಅತ್ಯಂತ ಅಪಾಯಕಾರಿಯಾಗಿದ್ದಾರೆ. ಸಮಯ ಬಂದಾಗ ನಾವು ಎನ್ಆರ್ಸಿ ಅನ್ನು ಜಾರಿಗೆ ತರುತ್ತೇವೆ” ಎಂದು ದೆಹಲಿ ಬಿಜೆಪಿ ಮುಖ್ಯಸ್ಥ ಮನೋಜ್ ತಿವಾರಿ ಹೇಳಿದ್ದಾರೆ.
ಬಿಜೆಪಿಯ ಅನೇಕ ನಾಯಕರು ಎನ್ಆರ್ಸಿ ಪಟ್ಟಿಗಳನ್ನು ದೇಶದ ಇತರ ಭಾಗಗಳಲ್ಲೂ ತರಬೇಕು ಎಂದು ಒತ್ತಾಯಿಸಿದ್ದಾರೆ. ಅಕ್ರಮ ವಲಸಿಗರ ಉಪಟಳ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಈ ಹೇಳಿಕೆಗಳು ಕೇಳಿ ಬರುತ್ತಿವೆ.
ಇತ್ತೀಚಿಗಷ್ಟೇ ಬೆಂಗಳೂರು ಸಂಸದ ತೇಜಸ್ವಿ ಸೂರ್ಯ ಅವರೂ, ಅಕ್ರಮ ಬಾಂಗ್ಲಾ ವಲಸಿಗರನ್ನು ಪತ್ತೆ ಹಚ್ಚಲು ಬೆಂಗಳೂರಿನಲ್ಲೂ ಎನ್ಆರ್ಸಿ ಅನ್ನು ನಡೆಸಬೇಕು ಎಂದು ಮನವಿಯನ್ನು ಮಾಡಿಕೊಂಡಿದ್ದರು.
ದೇಶದಲ್ಲಿರುವ ಅಕ್ರಮ ವಲಸಿಗರನ್ನು ಹೊರ ಹಾಕಲು ಬದ್ಧವಾಗಿರುವುದಾಗಿ ಕೇಂದ್ರ ಸರ್ಕಾರ ಈಗಾಗಲೇ ಘೋಷಣೆಯನ್ನು ಮಾಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.