ಶ್ರೀನಗರ: ಜಮ್ಮು ಕಾಶ್ಮೀರದ ವಿವಿಧ ಭಾಗಗಳ ಸುಮಾರು 575 ಯುವಕರು ಶನಿವಾರ ಭಾರತೀಯ ಸೇನೆಯನ್ನು ಸೇರ್ಪಡೆಗೊಂಡಿದ್ದಾರೆ. ಶ್ರೀನಗರದಲ್ಲಿ ನಡೆದ ಪಾಸಿಂಗ್ ಔಟ್ ಪೆರೇಡ್ ಬಳಿಕ ಈ ಯುವಕರನ್ನು ಸೇನೆಯ ಜಮ್ಮು ಕಾಶ್ಮೀರ ಲೈಟ್ ಇನ್ಫಾಂಟ್ರಿ ಪಡೆಗಳಿಗೆ ಸೇರ್ಪಡೆ ಮಾಡಲಾಗಿದೆ.
ಹೊಸದಾಗಿ ನೇಮಕಗೊಂಡವರು ಮಾತೃಭೂಮಿಯ ಸೇವೆ ಮಾಡಲು ಸಿದ್ಧರಾಗಿದ್ದಾರೆ ಮತ್ತು ಕರ್ತವ್ಯದ ವೇಳೆ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡುವುದಕ್ಕೂ ಅವರು ಹಿಂಜರಿಯುವುದಿಲ್ಲ. ಈಗ ಭಾರತೀಯ ಸೇನೆಯ ಭಾಗವಾಗಿದ್ದೇವೆ ಎಂಬ ಬಗ್ಗೆಯೂ ಅವರಿಗೆ ಹೆಮ್ಮೆ ಇದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
ಭಾರತೀಯ ಸೇನೆಯ ಹೊಸ ಸೈನಿಕರ ಕುಟುಂಬ ಸದಸ್ಯರು ಪಾಸಿಂಗ್ ಔಟ್ ಪೆರೇಡ್ ಸಮಾರಂಭದಲ್ಲಿ ಭಾಗಿಯಾಗಿದ್ದು, ಅತೀವ ಹೆಮ್ಮೆಯನ್ನು ವ್ಯಕ್ತಪಡಿಸಿದ್ದಾರೆ.
ಜಮ್ಮು ಕಾಶ್ಮೀರದ ಪ್ರದೇಶದಲ್ಲಿ ಹಲವಾರು ನೇಮಕಾತಿ ಅಭಿಯಾನಗಳನ್ನು ನಡೆಸಲಾಗುವುದು ಎಂದು ಲೆಫ್ಟಿನೆಂಟ್ ಜನರಲ್ ಅಶ್ವಿನಿ ಕುಮಾರ್ ಹೇಳಿದ್ದಾರೆ. ಇದು ಜಮ್ಮು ಮತ್ತು ಕಾಶ್ಮೀರದ ಚಿತ್ರಣ ಬದಲಾಗುತ್ತಿರುವ ಸಂಕೇತವಾಗಿದೆ ಎಂದಿದ್ದಾರೆ. “ಜೀವನದಲ್ಲಿ ಮುಂದುವರಿಯಲು ಬಯಸುವ ಎಲ್ಲರೊಂದಿಗೆ ಭಾರತೀಯ ಸೇನೆ ನಿಲ್ಲುತ್ತದೆ” ಎಂಬ ಭರವಸೆಯನ್ನು ಅವರು ನೀಡಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ಲೈಟ್ ಇನ್ಫಾಂಟ್ರಿ ಪಡೆಯನ್ನು 1947 ರಲ್ಲಿ ಸ್ಥಾಪನೆ ಮಾಡಲಾಗಿದೆ. ಅಕ್ರಮವಾಗಿ ಒಳನುಸುಳುವವರನ್ನು ತಡೆಯುವ ನಿಟ್ಟಿನಲ್ಲಿ ಈ ಪಡೆಯನ್ನು ರಚನೆ ಮಾಡಲಾಗಿದೆ.
ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ಒದಗಿಸಿದ್ದ 370 ನೇ ವಿಧಿಯನ್ನು ರದ್ದುಪಡಿಸಿದ ನಂತರ, ಜಮ್ಮು ಮತ್ತು ಕಾಶ್ಮೀರ ಪರಿವರ್ತನೆಗೆ ಒಳಗಾಗುತ್ತಿರುವ ಈ ಸಮಯದಲ್ಲಿ ಈ ಯುವಕರು ಸೇನೆಗೆ ಸೇರಿರುವುದು ಸಕಾರಾತ್ಮಕ ಬೆಳವಣಿಗೆಯಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.