ಭೋಪಾಲ್: ವ್ಯಾಪಂ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಗಳ ಸಾವಿನ ಸರಣಿ ಮುಂದುವರೆದಿದೆ, ಪತ್ರಕರ್ತ ಅಕ್ಷಯ್ ಸಿಂಗ್ ಮತ್ತು ನೇತಾಜೀ ಸುಭಾಷ್ ಚಂದ್ರ ಬೋಸ್ ಮೆಡಿಕಲ್ ಕಾಲೇಜಿನ ಡೀನ್ ಡಾ.ಅರುಣ್ ಶರ್ಮಾ ಅವರ ಸಾವು ಇಡೀ ದೇಶವನ್ನು ತಲ್ಲಣಗೊಳಿಸಿರುವ ಬೆನ್ನಲ್ಲೇ ಇದೀಗ ಮತ್ತೋರ್ವ ಮಹಿಳೆ ಸಾವಿಗೀಡಾಗಿದ್ದಾಳೆ.
ವ್ಯಾಪಮ್ ಪರೀಕ್ಷೆಯ ಮೂಲಕ ಎಸ್ಐ ಆಗಿ ನೇಮಕವಾಗಿ ಮಧ್ಯಪ್ರದೇಶ್ ಸಾಗರ್ ಪೊಲೀಸ್ ಅಕಾಡಮಿಯಲ್ಲಿ ತರಬೇತಿ ಪಡೆಯುತ್ತಿದ್ದ ಅನಾಮಿಕ ಕುಶ್ವಾ ಎಂಬುವವರ ಮೃತದೇಹ ಸಾಗರದ ಕೆರೆಯೊಂದರಲ್ಲಿ ಸೋಮವಾರ ಪತ್ತೆಯಾಗಿದೆ.
ಈಕೆ ವ್ಯಾಪಮ್ ಹಗರಣದ ಆರೋಪಿಯಲ್ಲ, ಈಕೆ ವ್ಯಾಪಮ್ನಿಂದ ಸಹಾಯವನ್ನು ಪಡೆದುಕೊಂಡಿದ್ದಾಳೆ ಎಂಬುದಕ್ಕೆ ಯಾವುದೇ ಸಾಕ್ಷಿಗಳಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಈಕೆಯ ಸಾವು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಈಕೆಯ ಸಾವಿನೊಂದಿಗೆ ವ್ಯಾಪಮ್ ಹಗರಣಕ್ಕೆ ಸಂಬಂಧಿಸಿದವರ ಸಾವಿನ ಸಂಖ್ಯೆ ೪೬ಕ್ಕೆ ಏರಿಕೆಯಾಗಿದೆ. ಆದರೂ ಪ್ರಕರಣವನ್ನು ಸಿಬಿಐಗೆ ವಹಿಸಲು ಅಲ್ಲಿನ ಸರ್ಕಾರ ಮುಂದಾಗದೇ ಇರುವುದು ದುರಾದೃಷ್ಟಕರ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.