ನವದೆಹಲಿ : ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಇಂದು ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರನ್ನು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ.
ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷೆ ಡಾ. ತಮಿಳಿಸೈ ಸೌಂದರರಾಜನ್ ಅವರು ತೆಲಂಗಾಣದ ರಾಜ್ಯಪಾಲರಾಗಿದ್ದಾರೆ. ಇದೇ ಮೊದಲ ಬಾರಿಗೆ ತೆಲಂಗಾಣ ಪ್ರತ್ಯೇಕ ರಾಜ್ಯಪಾಲರನ್ನು ಹೊಂದುತ್ತಿದೆ.
ಹಿಮಾಚಲ ಪ್ರದೇಶದ ರಾಜ್ಯಪಾಲರಾಗಿ ಬಂಡಾರು ದತ್ತಾತ್ರೇಯ ಅವರು ನೇಮಕಗೊಂಡಿದ್ದಾರೆ. ಕಲರಾಜ್ ಮಿಶ್ರಾ ಅವರ ಜಾಗಕ್ಕೆ ಇವರ ನೇಮಕವಾಗಿದೆ.
ಮಾಜಿ ಕೇಂದ್ರ ಸಚಿವ ಅರೀಫ್ ಮೊಹಮ್ಮದ್ ಖಾನ್ ಅವರು ಕೇರಳ ರಾಜ್ಯಪಾಲರಾಗಿ ನೇಮಕವಾಗಿದ್ದಾರೆ. ಮಹಾರಾಷ್ಟ್ರ ರಾಜ್ಯಪಾಲರಾಗಿ ಭಗತ್ ಸಿಂಗ್ ಕೋಶ್ಯಾರಿ ನೇಮಕವಾಗಿದ್ದಾರೆ.
ಕಲರಾಜ್ ಮಿಶ್ರಾ ಅವರು ರಾಜಸ್ಥಾನದ ರಾಜ್ಯಪಾಲರಾಗಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.