ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಉಜ್ವಲಾ ಯೋಜನೆಯು ತನ್ನ ಎಂಟು ಕೋಟಿ ಅನಿಲ ಸಂಪರ್ಕದ ಗುರಿಯನ್ನು ಆರು ತಿಂಗಳುಗಳಿಗೂ ಮುಂಚಿತವಾಗಿ ಅಂದರೆ 2020ರ ಮಾರ್ಚ್ ತಿಂಗಳಿಗೂ ಮುನ್ನವೇ ತಲುಪಲಿದೆ ಎಂದು ವರದಿಗಳು ಹೇಳುತ್ತಿವೆ.
ಈ ಯೋಜನೆಯು ಬಡ ಕುಟುಂಬಗಳಿಗೆ ಉಚಿತ ಅನಿಲ ಸಂಪರ್ಕವನ್ನು ಒದಗಿಸುವ ಗುರಿಯನ್ನು ಹೊಂದಿದೆ ಮತ್ತು ಮುಂದಿನ ಹಂತದಲ್ಲಿ ಇನ್ನೂ ದೊಡ್ಡ ಪ್ರಮಾಣದಲ್ಲಿ ಫಲಾನುಭವಿಗಳನ್ನು ಹೊಂದುವ ನಿರೀಕ್ಷೆಯನ್ನು ಇಟ್ಟುಕೊಂಡಿದೆ. ಆಗಸ್ಟ್ 26 ರ ವೇಳೆಗೆಯೇ ಯೋಜನೆಯಡಿಯಲ್ಲಿ 7.96 ಕೋಟಿಗೂ ಹೆಚ್ಚು ಸಂಪರ್ಕಗಳನ್ನು ಒದಗಿಸಲಾಗಿದೆ.
ಮೂರು ವರ್ಷಗಳಲ್ಲಿ 5 ಕೋಟಿ ಕುಟುಂಬಗಳಿಗೆ ಅನಿಲ ಸಂಪರ್ಕವನ್ನು ವಿತರಿಸುವ ಆರಂಭಿಕ ಗುರಿಯೊಂದಿಗೆ ಉಜ್ವಲಾ ಯೋಜನೆಯನ್ನು 2016 ರ ಮೇ ತಿಂಗಳಲ್ಲಿ ಪ್ರಾರಂಭಿಸಲಾಯಿತು. ಅಲ್ಲಿಂದ ಇಲ್ಲಿಯವರೆಗೆ 7.96 ಕುಟುಂಬಗಳಿಗೆ ಅಡುಗೆ ಅನಿಲವನ್ನು ಪೂರೈಸಿರುವುದು ಈ ಯೋಜನೆಯ ಹೆಗ್ಗಳಿಕೆಯಾಗಿದೆ.
“ಬಡತನ ರೇಖೆಗಿಂತ ಕೆಳಗಿರುವ ಪ್ರತಿ ಕುಟುಂಬಕ್ಕೂ ಉಚಿತ ಅನಿಲ ಸಂಪರ್ಕವನ್ನು ಒದಗಿಸುವ ಚಿಂತನೆ ಇದೆ. 8 ಕೋಟಿ ಗುರಿ ತಲುಪಿದ ನಂತರ ಉಜ್ಲ ಯೋಜನೆಯ ಮೌಲ್ಯಮಾಪನವನ್ನು ಆಧರಿಸಿ ಈ ಕುರಿತು ಘೋಷಣೆ ಮಾಡಲಾಗುವುದು. ಈ ಯೋಜನೆಯಡಿ ಫಲಾನುಭವಿಗಳ ಸಂಖ್ಯೆ ಭವಿಷ್ಯದಲ್ಲಿ ಏರಿಕೆಯಾಗಬಹುದು” ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
ಟಾರ್ಗೆಟ್ಗಿಂತ 6 ತಿಂಗಳು ಮುನ್ನವೇ 8 ಕೋಟಿ ಫಲಾನುಭವಿಗಳನ್ನು ಹೊಂದಲಿರುವ ಉಜ್ವಲ ಯೋಜನೆ ಕೇಂದ್ರ ಸರ್ಕಾರದ ಅತ್ಯಂತ ಯಶಸ್ವಿ ಯೋಜನೆಗಳಲ್ಲಿ ಒಂದಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.