ನವದೆಹಲಿ: ಗೃಹ ವ್ಯವಹಾರಗಳ ಸಚಿವಾಲಯವು ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಮೌಲಾನಾ ಮಸೂದ್ ಅಜರ್, ಜಮಾತ್-ಉದ್-ದವಾ ಮುಖ್ಯಸ್ಥ ಹಫೀಜ್ ಸಯೀದ್, ಲಷ್ಕರ್-ಎ-ತೈಬಾ ಜಾಕಿ-ಉರ್-ರಹಮಾನ್ ಲಖ್ವಿ ಮತ್ತು 1993 ರ ಮುಂಬೈ ಸ್ಫೋಟಗಳ ಮಾಸ್ಟರ್ ಮೈಂಡ್ ದಾವೂದ್ ಇಬ್ರಾಹಿಂ ಅವರುಗಳನ್ನು UAPA ಅಡಿಯಲ್ಲಿ ಭಯೋತ್ಪಾದಕರು ಎಂದು ಘೋಷಿಸಿದೆ.
ಮೌಲಾನಾ ಮಸೂದ್ ಅಜರ್ ನಿಷೇಧಿತ ಭಯೋತ್ಪಾದಕ ಸಂಘಟನೆಯ ಸ್ಥಾಪಕ, ಮುಖ್ಯಸ್ಥ ಮತ್ತು ಪ್ರಮುಖ ನಾಯಕನಾಗಿದ್ದಾನೆ ಎಂದು ಗೃಹ ವ್ಯವಹಾರಗಳ ಸಚಿವಾಲಯವು ಗೆಜೆಟ್ ಅಧಿಸೂಚನೆಯನ್ನು ಹೊರಡಿಸಿದೆ. ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ, 1967 ರ ಮೊದಲ ಅವಧಿಯ ಸರಣಿ ಸಂಖ್ಯೆ 6ರಡಿಯಲ್ಲಿ ಭಯೋತ್ಪಾದಕ ಸಂಘಟನೆಯಾಗಿ ಪಟ್ಟಿ ಮಾಡಲಾಗಿದೆ.
ಅಝರ್ ಜೈಶ್-ಎ-ಮೊಹಮ್ಮದ್ ಸಂಘಟನೆಯ ಆಶ್ರಯದಲ್ಲಿ ಭಯೋತ್ಪಾದಕ ಚಟುವಟಿಕೆಗಳಿಗೆ ನೇಮಕಾತಿ ಕಾರ್ಯಗಳನ್ನು ಈತ ವ್ಯಾಪಕವಾಗಿ ಕೈಗೊಳ್ಳುತ್ತಾನೆ ಮತ್ತು ಭಯೋತ್ಪಾದನೆಯನ್ನು ಉತ್ತೇಜಿಸಲು ಮತ್ತು ಭಾರತದ ವಿರುದ್ಧ ಚಟುವಟಿಕೆ ನಡೆಸುವಂತೆ ಜನರನ್ನು ಪ್ರೇರೇಸಿಸುತ್ತಾನೆ ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ. ಎಂಎಚ್ಎ ಪ್ರಕಾರ, ಅಜರ್ ವಿರುದ್ಧ ವಿವಿಧ ಪ್ರಕರಣಗಳನ್ನು ದಾಖಲಿಸಲಾಗಿದೆ ಮತ್ತು ರಾಷ್ಟ್ರೀಯ ತನಿಖಾ ಸಂಸ್ಥೆ ಆತನ ವಿರುದ್ಧ ತನಿಖೆ ನಡೆಸುತ್ತಿದೆ ಮತ್ತು ಪಠಾಣ್ಕೋಟ್ ವಾಯುನೆಲೆ ದಾಳಿ ಪ್ರಕರಣದಲ್ಲಿ ಆತನ ವಿರುದ್ಧ ಚಾರ್ಜ್ಶೀಟ್ ದಾಖಲಿಸಲಾಗಿದೆ.
ಹಫೀಜ್ ಮೊಹಮ್ಮದ್ ಸಯೀದ್ ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೋಯ್ಬಾ ಮತ್ತು ಜಮಾತ್-ಉದ್-ದಾವಾಸ್ಥಾಪಕ, ಮುಖ್ಯಸ್ಥ ಮತ್ತು ಪ್ರಮುಖ ನಾಯಕನಾಗಿದ್ದಾನೆ. ಈತನ ತೋಯ್ಬಾ ಭಯೋತ್ಪಾದಕ ಸಂಘಟನೆಯನ್ನು ಮೊದಲ ಅವಧಿಯಯಲ್ಲಿ ಪಟ್ಟಿ ಮಾಡಲಾಗಿದೆ ಎಂದು ಗೃಹ ಸಚಿವಾಲಯ ಅಧಿಸೂಚನೆಯಲ್ಲಿ ತಿಳಿಸಿದೆ. ಸರಣಿ ಸಂಖ್ಯೆ 5 ರಲ್ಲಿ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ, 1967 ಅಡಿಯಲ್ಲಿ ಇದನ್ನು ಪಟ್ಟಿ ಮಾಡಲಾಗಿದೆ. ಸಯೀದ್ ಭಾರತದಲ್ಲಿ ವಿವಿಧ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿದ್ದಾನೆ, ಇದರಲ್ಲಿ ಕೆಂಪು ಕೋಟೆ ಮೇಲೆ ದಾಳಿ , ರಾಂಪುರ್ ದಾಳಿ, 26/11 ಮುಂಬೈ ದಾಳಿ, ಜಮ್ಮು ಮತ್ತು ಕಾಶ್ಮೀರದ ಉಧಂಪುರದಲ್ಲಿ ಬಿಎಸ್ಎಫ್ ಕಾನ್ವಾಯ್ ಮೇಲೆ ದಾಳಿಗಳು ಸೇರಿವೆ.
ಉಳಿದಂತೆ ಜಾಕಿ-ಉರ್-ರೆಹಮಾನ್ ಲಖ್ವಿ ಮತ್ತು ದಾವೂದ್ ಇಬ್ರಾಹಿಂ ಅನ್ನೂ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ, 1967 ರ ಅಡಿಯಲ್ಲಿ ಭಯೋತ್ಪಾದಕ ಎಂದು ಘೋಷಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.