ಬೆಂಗಳೂರು: ಚಂದ್ರಯಾನ-2 ಗಗನ ನೌಕೆ ಇಂದು ಮಧ್ಯರಾತ್ರಿ ಚಂದ್ರನ ದಕ್ಷಿಣ ಧ್ರುವಕ್ಕೆ ಇಳಿಯುವ ಐತಿಹಾಸಿಕ ಕ್ಷಣವನ್ನು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಸುಮಾರು 60 ಮಕ್ಕಳೊಂದಿಗೆ ಕುಳಿತು ಬೆಂಗಳೂರಿನ ಇಸ್ರೋ ಕೇಂದ್ರ ಕಛೇರಿಯಲ್ಲಿ ವೀಕ್ಷಣೆ ಮಾಡಲಿದ್ದಾರೆ.
ಐತಿಹಾಸಿಕ ಘಟನೆಗೆ ಸಾಕ್ಷಿಯಾಗಲು ಇನ್ನು ಕೆಲವೇ ಗಂಟೆಗಳು ಬಾಕಿ ಉಳಿದಿವೆ. ದೇಶದ ಪ್ರಧಾನಿಯೊಂದಿಗೆ ಕುಳಿತು ಮಹತ್ವದ ಕ್ಷಣವೊಂದನ್ನು ವೀಕ್ಷಣೆ ಮಾಡಲು ಮಕ್ಕಳು ತುದಿಗಾಲಲ್ಲಿ ನಿಂತಿದ್ದಾರೆ.
ಕರ್ನಾಟಕದ ರಾಯಚೂರು ಜಿಲ್ಲೆಯ ಸಿಂಧನೂರಿನ ಡಾಫೋಡಿಲ್ಸ್ ಕಾನ್ಸೆಪ್ಟ್ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಜಿ.ವೈಷ್ಣವಿ ನಾಗರಾಜ, ದೆಹಲಿ ಬಾಲಕ ಮನೋಗ್ಯಸಿಂಗ್ ಸುಯಾಂಶ್, ಒರಿಸ್ಸಾದ ಚಿನ್ಮಯ ಚೌಧರಿ, ಮೇಘಾಲಯದ ರಿಬೈಟ್ ಫವಾ, ಆಂಧ್ರಪ್ರದೇಶದ ಪ್ರಗದ ಕಾಂಚನ ಬಾಲಸ್ರಿ ವಾಸವಿ, ಲಕ್ನೋದ ರಾಶಿ ವರ್ಮಾ, ಸೇರಿದಂತೆ ಸುಮಾರು 60 ಮಂದಿ ಮಕ್ಕಳು ಚಂದ್ರಯಾನ 2 ಲ್ಯಾಂಡರ್ ಚಂದ್ರನ ಅಂಗಳಕ್ಕೆ ಇಳಿಯುವ ರೋಚಕ ಕ್ಷಣಕ್ಕೆ ಸಾಕ್ಷಿಯಾಗಲಿದ್ದಾರೆ.
ಆಗಸ್ಟ್ 8 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗಾಗಿ ಇಸ್ರೋ ನಡೆಸಿದ ಆನ್ಲೈನ್ ರಸಪ್ರಶ್ನೆಯಲ್ಲಿ ಆಯ್ಕೆಯಾದ 60 ವಿದ್ಯಾರ್ಥಿಗಳು ಈ ಅವಕಾಶವನ್ನು ಪಡೆದುಕೊಂಡಿದ್ದಾರೆ.
ಜುಲೈ 22 ರಂದು ಉಡಾವಣೆಯಾದ ಚಂದ್ರಯಾನ-2 ಆರ್ಬಿಟರ್, ಲ್ಯಾಂಡರ್ ಮತ್ತು ರೋವರ್ ಒಳಗೊಂಡ ಮೂರು-ಮಾಡ್ಯೂಲ್ ಬಾಹ್ಯಾಕಾಶ ನೌಕೆಯಾಗಿದೆ. ಇದು ಶನಿವಾರ ಮುಂಜಾನೆ 1:43 ಕ್ಕೆ ಚಂದ್ರನ ಮೇಲೆ ಇಳಿಯುವ ನಿರೀಕ್ಷೆಯಿದೆ ಮತ್ತು ವಿದ್ಯಾರ್ಥಿಗಳು ಇದನ್ನು ನೇರಪ್ರಸಾರದಲ್ಲಿ ವೀಕ್ಷಣೆ ಮಾಡಲಿದ್ದಾರೆ. ಯೋಜನೆಯನ್ನು ಮುನ್ನಡೆಸುತ್ತಿರುವ ಇಸ್ರೋ ವಿಜ್ಞಾನಿಗಳು ಮತ್ತು ದೇಶದ ಪ್ರಧಾನಿಗಳು ಈ ಕ್ಷಣವನ್ನು ಕಣ್ತುಂಬಿಕೊಳ್ಳಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.