ನವದೆಹಲಿ: ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ-2 ಗಗನನೌಕೆಯು ಇಂದು ಮಧ್ಯರಾತ್ರಿಯ ಬಳಿಕ ಚಂದ್ರನ ಮೇಲ್ಮೈ ಅನ್ನು ಸ್ಪರ್ಶಿಸಲಿದೆ. ಈ ಐತಿಹಾಸಿಕ ಘಟನೆಯನ್ನು ಪ್ರಧಾನಿ ನರೇಂದ್ರ ಮೋದಿಯವರು ಬೆಂಗಳೂರಿನ ಇಸ್ರೋ ಕಛೇರಿಯಲ್ಲಿ ಮಕ್ಕಳೊಂದಿಗೆ ಕುಳಿತು ವೀಕ್ಷಣೆ ಮಾಡಲಿದ್ದಾರೆ.
ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗುವುದಕ್ಕೆ ಉತ್ಸುಹುಕತೆಯನ್ನು ತೋರಿಸಿರುವ ಪ್ರಧಾನಿ ನರೇಂದ್ರ ಮೋದಿಯವರು, “ನಮ್ಮ ಬಾಹ್ಯಾಕಾಶ ವಿಜ್ಞಾನಿಗಳ ಆದರ್ಶಪ್ರಾಯ ಪರಾಕ್ರಮವನ್ನು ನೋಡುವಂತೆ ಜನರಲ್ಲಿ ಮನವಿ ಮಾಡಿಕೊಳ್ಳುತ್ತೇನೆ” ಎಂದು ಟ್ವಿಟ್ ಮಾಡಿದ್ದಾರೆ.
“ಭಾರತದ ಬಾಹ್ಯಾಕಾಶ ಕಾರ್ಯಕ್ರಮದ ಇತಿಹಾಸದ ಅಸಾಧಾರಣ ಕ್ಷಣಕ್ಕೆ ಸಾಕ್ಷಿಯಾಗಲು ನಾನು ಬೆಂಗಳೂರಿನ ಇಸ್ರೋ ಕೇಂದ್ರದಲ್ಲಿರಲು ತುಂಬಾ ಉತ್ಸುಕನಾಗಿದ್ದೇನೆ. ಆ ವಿಶೇಷ ಕ್ಷಣಗಳನ್ನು ವೀಕ್ಷಿಸಲು ವಿವಿಧ ರಾಜ್ಯಗಳ ವಿದ್ಯಾರ್ಥಿಗಳು ಸಹ ಹಾಜರಾಗುತ್ತಿದ್ದಾರೆ. ಭೂತಾನ್ನ ಯುವಕರು ಕೂಡ ಇರುತ್ತಾರೆ” ಎಂದಿದ್ದಾರೆ.
ಸರಣಿ ಟ್ವಿಟ್ ಮಾಡಿರುವ ಪ್ರಧಾನಿ ಮೋದಿ, “ಚಂದ್ರಯಾನ – 2 ಚಂದ್ರನ ದಕ್ಷಿಣ ಧ್ರುವಕ್ಕೆ ಇಳಿಯುವ ವಿಶೇಷ ಕ್ಷಣಗಳನ್ನು ವೀಕ್ಷಿಸಬೇಕೆಂದು ನಾನು ನಿಮ್ಮೆಲ್ಲರನ್ನೂ ಕೋರುತ್ತೇನೆ. ನೀವು ಚಂದ್ರಯಾನ-2 ಇಳಿಯುವ ದೃಶ್ಯಗಳನ್ನು ನೋಡುವ ನಿಮ್ಮ ಫೋಟೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಿ. ಅವುಗಳಲ್ಲಿ ಕೆಲವನ್ನು ನಾನು ಮರು ಟ್ವೀಟ್ ಮಾಡುತ್ತೇನೆ” ಎಂದಿದ್ದಾರೆ.
“ನಾನು ಜುಲೈ 22 ರಂದು ಚಂದ್ರಯಾನ-2 ಉಡಾವಣೆಗೊಂಡಾಗಿನಿಂದಲೂ ಅದಕ್ಕೆ ಸಂಬಂಧಿಸಿದ ಎಲ್ಲಾ ವಿಷಯಗಳನ್ನು ನಿಯಮಿತವಾಗಿ ಮತ್ತು ಉತ್ಸಾಹದಿಂದ ಟ್ರ್ಯಾಕ್ ಮಾಡುತ್ತಿದ್ದೇನೆ. ಈ ಮಿಷನ್ ಭಾರತೀಯ ಪ್ರತಿಭೆ ಮತ್ತು ಸ್ಥಿರತೆಯ ಮನೋಭಾವವನ್ನು ತೋರಿಸುತ್ತದೆ. ಇದರ ಯಶಸ್ಸು ಕೋಟ್ಯಂತರ ಭಾರತೀಯರಿಗೆ ಪ್ರಯೋಜನವನ್ನು ನೀಡುತ್ತದೆ” ಎಂದಿದ್ದಾರೆ.
I am extremely excited to be at the ISRO Centre in Bengaluru to witness the extraordinary moment in the history of India’s space programme. Youngsters from different states will also be present to watch those special moments! There would also be youngsters from Bhutan.
— Narendra Modi (@narendramodi) September 6, 2019
I urge you all to watch the special moments of Chandrayaan – 2 descending on to the Lunar South Pole! Do share your photos on social media. I will re-tweet some of them too.
— Narendra Modi (@narendramodi) September 6, 2019
The moment 130 crore Indians were enthusiastically waiting for is here!
In a few hours from now, the final descent of Chandrayaan – 2 will take place on the Lunar South Pole.
India, and the rest of the world will yet again see the exemplary prowess of our space scientists.
— Narendra Modi (@narendramodi) September 6, 2019
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.