ವಾಷಿಂಗ್ಟನ್ ಡಿಸಿ : ಚಂದ್ರನ ದಕ್ಷಿಣ ಧ್ರುವದಲ್ಲಿ ಚಂದ್ರಯಾನ-2 ಮಿಷನ್ನ ವಿಕ್ರಮ್ ಲ್ಯಾಂಡರ್ ಅನ್ನು ಇಳಿಸಲು ಯತ್ನಿಸಿದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಕೇಂದ್ರ ಇಸ್ರೋದ ಕಾರ್ಯವನ್ನು ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ಶ್ಲಾಘಿಸಿದೆ.
ಇಸ್ರೋದ ಪಯಣವು ನಮಗೆ ಪ್ರೇರಣೆಯಾಗಿದೆ ಎಂದಿರುವ ನಾಸಾ, ಮುಂದಿನ ದಿನಗಳಲ್ಲಿ ಬಾಹ್ಯಾಕಾಶದ ಯೋಜನೆಗಳಲ್ಲಿ ಇಸ್ರೋದೊಂದಿಗೆ ಕೈಜೋಡಿಸಲು ಉತ್ಸುಕವಾಗಿರುವುದಾಗಿ ಅದು ಹೇಳಿದೆ.
ಟ್ವೀಟ್ ಮಾಡಿರುವ ನಾಸಾ, “ಬಾಹ್ಯಾಕಾಶ ಅತ್ಯಂತ ಕಠಿಣವಾದುದು, ಚಂದ್ರನ ದಕ್ಷಿಣ ಧ್ರುವಕ್ಕೆ ಚಂದ್ರಯಾನ-2 ನೌಕೆಯನ್ನು ಕಳುಹಿಸಿದ ಇಸ್ರೋದ ಕಾರ್ಯವನ್ನು ನಾವು ಶ್ಲಾಘಿಸುತ್ತೇವೆ. ನೀವು ನಿಮ್ಮ ಪಯಣದ ಮೂಲಕ ನಮ್ಮನ್ನು ಪ್ರೇರೇಪಿಸಿದ್ದೀರಿ, ಸೌರ ವ್ಯವಸ್ಥೆಯನ್ನು ಅನ್ವೇಷಿಸಲು ನಿಮ್ಮೊಂದಿಗೆ ಕೈಜೋಡಿಸಲು ನಾವು ಉತ್ಸುಕರಾಗಿದ್ದೇವೆ” ಎಂದಿದೆ.
Space is hard. We commend @ISRO’s attempt to land their #Chandrayaan2 mission on the Moon’s South Pole. You have inspired us with your journey and look forward to future opportunities to explore our solar system together. https://t.co/pKzzo9FDLL
— NASA (@NASA) September 7, 2019
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.