ಭುವನೇಶ್ವರ: ದೊಡ್ಡ ಕನಸುಗಳನ್ನು ಕಾಣಿರಿ ಮತ್ತು ಅದನ್ನು ನನಸಾಗಿಸಲು ಯಾವ ಸಂದರ್ಭದಲ್ಲಿ ಹಿಂಜರಿಯಬೇಡಿ. ಅದೇ ನಮ್ಮ ಯಶಸ್ಸಿನ ಮೊದಲ ಮೆಟ್ಟಿಲು. ತನ್ನ ಗುರಿಯನ್ನು ತಲುಪಲು ಅವಿರತ ಪ್ರಯತ್ನ ಮತ್ತು ದೃಢ ಹೆಜ್ಜೆಯನ್ನಿಟ್ಟ ಒರಿಸ್ಸಾದ ಅತ್ಯಂತ ಹಿಂದುಳಿದ ಪ್ರದೇಶವಾದ ಮಲ್ಕನ್ಗಿರಿಯ ಅನುಪ್ರಿಯ ಲಕ್ರ ಅವರು ಇಂದು ಆ ಪ್ರದೇಶದ ಮೊದಲ ಬುಡಕಟ್ಟು ಮಹಿಳಾ ಪೈಲೆಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಮಲ್ಕನ್ಗಿರಿ ನಕ್ಸಲ್ ಪೀಡಿತ ಪ್ರದೇಶವಾಗಿದ್ದು ಅಭಿವೃದ್ಧಿಯಿಂದ ಸಾಕಷ್ಟು ಹಿಂದಿದೆ. ಇಂತಹ ಪ್ರದೇಶದ ಬುಡಕಟ್ಟು ಮಹಿಳೆಯೊಬ್ಬಳು ಪೈಲೆಟ್ ಆಗಿದ್ದಾರೆ ಎಂಬುದು ನಿಜಕ್ಕೂ ಹೆಮ್ಮೆಯ ಸಂಗತಿಯಾಗಿದೆ.
23 ವರ್ಷದ ಅನುಪ್ರಿಯ ಅವರು ತಮ್ಮ ಕನಸನ್ನು ನನಸಾಗಿಸಲು ಏಳು ವರ್ಷಗಳ ಹಿಂದೆ ಇಂಜಿನಿಯರಿಂಗ್ ಅಧ್ಯಯನವನ್ನು ಅರ್ಧದಲ್ಲಿ ಕೈಬಿಟ್ಟು, 2012ರಲ್ಲಿ ಏವಿಯೇಷನ್ ಅಕಾಡೆಮಿಯನ್ನು ಸೇರ್ಪಡೆಗೊಂಡರು. ಪ್ರಸ್ತುತ ಅವರು ತಮ್ಮ ಕನಸನ್ನು ನನಸಾಗಿಸಿಕೊಂಡಿದ್ದಾರೆ ಮತ್ತು ಶೀಘ್ರದಲ್ಲೇ ಖಾಸಗಿ ವಿಮಾನಯಾನ ಸಂಸ್ಥೆಯೊಂದರಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ.
ಒರಿಸ್ಸಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಅವರ ಸಾಧನೆಯನ್ನು ಕೊಂಡಾಡಿದ್ದಾರೆ. ಆಕೆಯ ಸಾಧನೆಯಿಂದ ನಾವೆಲ್ಲರೂ ಕಲಿಯುವಂಥದ್ದು ಸಾಕಷ್ಟಿದೆ, ಧೃಡತತ್ವ ಮತ್ತು ಶ್ರದ್ಧೆಯಿಂದ ಅವರು ತಮ್ಮ ಗುರಿಯನ್ನು ತಲುಪಿದ್ದಾರೆ “ಎಂದು ಅವರು ಟ್ವೀಟ್ ಮಾಡಿದ್ದಾರೆ.
ମାଲକାନଗିରି ଜିଲ୍ଲାର ଝିଅ ଅନୁପ୍ରିୟା ଲାକ୍ରାଙ୍କ ସଫଳତା ବିଷୟରେ ଜାଣି ମୁଁ ବହୁତ ଖୁସି। ନିଷ୍ଠାପର ଉଦ୍ୟମ ବଳରେ ସେ ହାସଲ କରିଥିବା ସଫଳତା ଅନେକଙ୍କ ପାଇଁ ଉଦାହରଣ। ଜଣେ ଦକ୍ଷ ପାଇଲଟ୍ ଭାବେ ଆଗାମୀ ଦିନରେ ସେ ଆହୁରି ସୁନାମ ଅର୍ଜନ କରନ୍ତୁ। ତାଙ୍କୁ ମୋର ଶୁଭେଚ୍ଛା ଓ ସାଧୁବାଦ।https://t.co/1IIbEwJxHf
— Naveen Patnaik (@Naveen_Odisha) September 8, 2019
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.