ತಿಕ್ಮಾಗರ್: ವ್ಯಾಪಮ್ ಹಗರಣದ ಆರೋಪಿಗಳ ಮರಣ ಮೃದಂಗ ಮುಂದುವರೆದಿದೆ. ನಿನ್ನೆ ಮಹಿಳಾ ಪೊಲೀಸ್ವೊಬ್ಬರು ಮೃತಪಟ್ಟ ಬೆನ್ನಲ್ಲೇ ಇದೀಗ ಮತ್ತೋರ್ವ ಪೊಲೀಸ್ ಪೇದೆ ಆತ್ಮಹತ್ಯೆಗೆ ಶರಣಾಗಿದ್ದಾನೆ.
40 ವರ್ಷದ ಕಾನ್ಸ್ಸ್ಟೇಬಲ್ ರಮಾಕಾಂತ್ ಪಾಂಡ ಎಂಬುವವರು ತನ್ನ ಮನೆಯ ನಿವಾಸದಲ್ಲಿ ಸೀಲಿಂಗ್ ಫ್ಯಾನ್ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವ್ಯಾಪಮ್ ಹಗರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ಈ ಹಿಂದೆ ಇವರನ್ನು ವಿಚಾರಣೆಗೊಳಪಡಿಸಿತ್ತು ಎಂದು ಹೇಳಲಾಗಿದೆ.
ಆದರೆ ಪೊಲೀಸರು ಈತ ವ್ಯಾಪಮ್ ಹಗರಣದ ಆರೋಪಿ ಎಂಬುದನ್ನು ನಿರಾಕರಿಸಿದ್ದು, ಈತ ಕುಡುಕನಾಗಿದ್ದು, ಸಿಕ್ಕಾಬಟ್ಟೆ ಸಾಲ ಮಾಡಿಕೊಂಡಿದ್ದ. ಹೀಗಾಗಿ ಈತ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದಿದ್ದಾರೆ.
ಇನ್ನೊಂದೆಡೆ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ಅವರು ಘಟನೆಯನ್ನು ಸಿಬಿಐ ತನಿಖೆಗೆ ವಹಿಸಲು ಸಾಧ್ಯವೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ, ಪ್ರಸ್ತುತ ನಡೆಯುತ್ತಿರುವ ತನಿಖೆಯನ್ನು ಹೈಕೋರ್ಟ್ ಮಾನಿಟರ್ ಮಾಡುತ್ತಿದೆ. ಹೀಗಾಗಿ ಸಿಬಿಐ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಆದರೆ ಹಗರಣವೊಂದಕ್ಕೆ ಸಂಬಂಧಿಸಿದಂತೆ 46 ಮಂದಿ ಮೃತರಾಗಿರುವುದು ದೇಶದ ಇತಿಹಾಸದಲ್ಲೇ ಮೊದಲು. ಇದೊಂದು ಕಿಲ್ಲರ್ ಹಗರಣವಾಗಿದ್ದು ಇದರ ಹಿಂದಿರುವ ಕಾಣದ ಕೈಗಳನ್ನು ಪತ್ತೆ ಹಚ್ಚುವುದು ಅತ್ಯಗತ್ಯ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.