News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಕಾಶ್ಮೀರ ಭಾರತ ಮತ್ತು ಪಾಕಿಸ್ತಾನ ನಡುವಿನ ವಿಷಯ ಎಂದ ವಿಶ್ವಸಂಸ್ಥೆ: ಪಾಕಿಸ್ಥಾನಕ್ಕೆ ಮುಖಭಂಗ

ಜಿನೆವಾ: ಕಾಶ್ಮೀರದ ವಿಷಯ ಪಾಕಿಸ್ತಾನ ಮತ್ತು ಭಾರತದ ನಡುವಿನ ವಿಷಯವಾಗಿದೆ ಎಂದು ವಿಶ್ವಸಂಸ್ಥೆಯ ಪ್ರಧಾನ ವಕ್ತಾರ ಸ್ಟೀಫನ್ ಡುಜರಿಕ್ ಬುಧವಾರ ಹೇಳಿದ್ದಾರೆ. ಅವರ ಈ ಹೇಳಿಕೆಯು ಭಾರತದ ವಾದವನ್ನು ಸಮರ್ಥಿಸಿಕೊಂಡಿದೆ ಮತ್ತು ಪಾಕಿಸ್ತಾನಕ್ಕೆ ತೀವ್ರ ಮುಖಭಂಗವನ್ನು ಉಂಟುಮಾಡಿದೆ.

ಜಮ್ಮು ಕಾಶ್ಮೀರದಲ್ಲಿನ ಪ್ರಸ್ತುತ ಸ್ಥಿತಿಗತಿಯ ಬಗ್ಗೆ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟರ್ರೆಸ್ ಅವರು ಆತಂಕ ವ್ಯಕ್ತಪಡಿಸಿದ್ದಾರೆ. ಆದರೆ ಉಭಯ ದೇಶಗಳು ಈ ಸಮಸ್ಯೆಯನ್ನು ಆದಷ್ಟು ಬೇಗ ಬಗೆಹರಿಸುತ್ತೇವೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದ್ದಾರೆ ಎಂದು ಸ್ಟೀಫನ್ ಹೇಳಿದ್ದಾರೆ.

ಕಾಶ್ಮೀರ ವಿಷಯವನ್ನು ಅಂತರರಾಷ್ಟ್ರೀಕರಣಗೊಳಿಸಲು ನಿರಂತರವಾಗಿ ಪ್ರಯತ್ನಿಸುತ್ತಿರುವ ಪಾಕಿಸ್ತಾನಕ್ಕೆ ಸ್ಟೀಫನ್ ಅವರ ಹೇಳಿಕೆಯು ತೀವ್ರ ಮುಖಭಂಗವನ್ನು ಉಂಟುಮಾಡಿದೆ. ಭಾರತವು ಕಾಶ್ಮೀರ ವಿಷಯವನ್ನು ಭಾರತ ಮತ್ತು ಪಾಕಿಸ್ತಾನ ನಡುವಿನ ದ್ವಿಪಕ್ಷೀಯ ವಿಷಯ ಎಂದು ಪ್ರತಿಪಾದಿಸುತ್ತಲೇ ಬಂದಿದೆ. ವಿಶ್ವಸಂಸ್ಥೆಯ ವಕ್ತಾರರು ಹೇಳಿಕೆಯು ಭಾರತದ ವಾದಕ್ಕೆ ಮತ್ತಷ್ಟು ಬಲ ನೀಡಿದೆ.

ಕಾಶ್ಮೀರ ವಿಷಯದಲ್ಲಿ ವಿಶ್ವಸಂಸ್ಥೆಯ ನಿಲುವು ಒಂದೇ ಆಗಿರುತ್ತದೆ, ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿಯವರು ಈ ವಿಷಯದಲ್ಲಿ ಪಾಕಿಸ್ತಾನ ಮತ್ತು ಭಾರತದ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ ಎಂದಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top